ಕರ್ನಾಟಕ

karnataka

ETV Bharat / state

ರಾಜ್ಯದ ಬಹುತೇಕ ಕಡೆ ಮುಂದಿನ 48 ಗಂಟೆ ಮಳೆ, ಹಲವೆಡೆ ಯೆಲ್ಲೋ ಅಲರ್ಟ್​ - ಬೆಂಗಳೂರು ಮಳೆ ಅಪ್​ಡೇಟ್​

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟಕ್ಕೆ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. ಹವಾಮಾನ ಇಲಾಖೆಯ ಲೇಟೆಸ್ಟ್‌ ವರದಿ ಹೇಳುವುದೇನು? ನೋಡೋಣ.

rain-will-continues-for-48-hours-in-many-parts-of-karnataka
ರಾಜ್ಯದ ಬಹುತೇಕ ಕಡೆ ಮುಂದಿನ 48 ಗಂಟೆ ಮಳೆ, ಹಲವೆಡೆ ಯೆಲ್ಲೋ ಅಲರ್ಟ್​

By

Published : Jul 17, 2022, 11:27 AM IST

ಬೆಂಗಳೂರು:ನೈಋತ್ಯ ಮುಂಗಾರು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ. ಬುಧವಾರದಿಂದ ಕೆಲ ಭಾಗಗಳಲ್ಲಿ ವರ್ಷಧಾರೆ ಪ್ರಮಾಣ ಇಳಿಮುಖವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಹಾಗೂ ಹಾಸನ ಜಿಲ್ಲೆಗೆ ಇಂದು ಮತ್ತು ನಾಳೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಜುಲೈ 18ರಂದು ಯೆಲ್ಲೊ ಅಲರ್ಟ್ ಇರಲಿದೆ ಎಂದು ಇಲಾಖೆ ಹೇಳಿದೆ.

ಗಾಳಿಯ ವೇಗ ಹೆಚ್ಚಳ:ಕರಾವಳಿ ತೀರದಲ್ಲಿ ಗಾಳಿಯ ವೇಗವು ಸದ್ಯ ಪ್ರತಿ ಗಂಟೆಗೆ 40 ಕಿ.ಮೀ.ನಿಂದ 50 ಕಿ.ಮೀ. ಇದೆ. ಈ ವೇಗವು 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ:ಶನಿವಾರ ಬೆಂಗಳೂರು ನಗರದಲ್ಲಿ 4.7 ಮಿ.ಮೀ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ 12.1 ಮಿ.ಮೀ, ಹೆಚ್ಎಎಲ್ ವಿಮಾನ ನಿಲ್ದಾಣದ ಆಸುಪಾಸಿನಲ್ಲಿ 8.0 ಮಿ.ಮೀ ಮಳೆಯಾಗಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಮುಂದಿನ 48 ಗಂಟೆಗಳ ಕಾಲ ಮುಂದುವರೆಯಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ABOUT THE AUTHOR

...view details