ಬೆಂಗಳೂರು: ರಾಜಧಾನಿ ಸೇರಿದಂತೆ ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಇನ್ನೂ ಕೆಲವು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ ಸಿಲಿಕಾನ್ ಸಿಟಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ನಾಳೆಯವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹೇಳಿದೆ.