ಬೆಂಗಳೂರು: ಇಂದಿನಿಂದ ರಿಂದ ಆಗಸ್ಟ್ 1 ರವರೆಗೆ ಹವಾಮಾನ ಸ್ಥಿತಿಗತಿಗಳ ಕುರಿತು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಮತ್ತು ವಿಜ್ಞಾನಿಯಾದ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದು, ಇಂದು ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಹಾಗು ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಬಹುತೇಕ ಕಡೆ ಮಾನ್ಸೂನ್ ದುರ್ಬಲವಾಗಿದೆ. ಹೀಗಿದ್ದರೂ ಉತ್ತರ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ 4 ಸೆಂ. ಮೀ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 3 ಸೆಂ. ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈಗಿರುವ ಸ್ಥಿತಿಗತಿ ವಿವರಿಸುತ್ತಾ, ಕರಾವಳಿ ಪ್ರದೇಶದಲ್ಲಿ ಕಡಿಮೆ ಒತ್ತಡವಿರುವ ಹಾಗೂ ವಿಸ್ತರಿಸಿದ ಪ್ರದೇಶವಿದೆ. ಜುಲೈ 28 ರಿಂದ ಆಗಸ್ಟ್ 1 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗು ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಂಭವವಿದೆ ಎಂದು ಮಾಹಿತಿ ನೀಡಿದ್ದಾರೆ.