ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಇಂದಿನಿಂದ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮಧ್ಯ ಕರ್ನಾಟಕದ ಬಯಲುಸೀಮೆ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 20 (ನಾಳೆ) ಬಯಲು ಸೀಮೆಯ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಹವಾಮಾನ ತಜ್ಞ ಸದಾನಂದ ಅಡಿಗ, ಇಂದು ಕರಾವಳಿ ಭಾಗ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. 20, 21 ಮತ್ತು 22 ರಂದು ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ನಾಳೆ ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರದಲ್ಲಿ ಮಳೆಯಾಗಲಿದೆ ಎಂದಿದ್ದಾರೆ.