ಕರ್ನಾಟಕ

karnataka

ETV Bharat / state

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಹಲವು ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಇಂದು ರಾತ್ರಿ ವೇಳೆ ಹಗುರ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.

By

Published : Nov 4, 2020, 4:12 PM IST

http://10.10.50.85//karnataka/04-November-2020/kn-bng-02-rainforecast-7202707_04112020154207_0411f_01540_290.jpg
ಸಂಗ್ರಹ ಚಿತ್ರ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇಂದು ಸುಳ್ಯದಲ್ಲಿ 2 ಸೆಂ.ಮೀ. ಹಾಗೂ ಭಾಗಮಂಡಲದಲ್ಲಿ 1 ಸೆಂ.ಮೀ. ಮಳೆಯಾಗಿದೆ.

ABOUT THE AUTHOR

...view details