ಬೆಂಗಳೂರು:ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದ ಪರಿಣಾಮ ಈ ಬಾರಿ ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಂಗಾಳ ಕೊಲ್ಲಿಯಲ್ಲಿ ಕಂಡುಬರುತ್ತಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಈ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯಕ್ಕೆ ತಮಿಳುನಾಡು ಕರಾವಳಿಯಲ್ಲಿ ಸುಳಿಗಾಳಿ ನಿರ್ಮಾಣವಾಗಿದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಂಗಳವಾರ ಗುಡುಗು ಸಹಿತ ಧಾರಾಕಾರ ಮಳೆ ಬೀಳಲಿದೆ. ನಾಳೆ ಮಳೆ ಅಬ್ಬರ ಕಡಿಮೆಯಾಗಲಿದೆ. ನವೆಂಬರ್ 11 ಹಾಗೂ 12 ರಂದು ಕೆಲವೆಡೆ ಭಾರಿ ಮಳೆ ಬೀಳಲಿದೆ ಎಂಬ ಮಾಹಿತಿ ದೊರೆತಿದೆ. ಪ್ರಮುಖವಾಗಿ ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.