ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಸಂಜೆ ವೇಳೆ ಮನೆಕಡೆ ತೆರಳುವ ಜನರು ವರ್ಷಧಾರೆಯಿಂದ ತೊಂದರೆ ಅನುಭವಿಸುವಂತಾಗಿದೆ.
ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ; ಇನ್ನೂ ಎರಡು ದಿನ ಮುಂದುವರಿಕೆ - ಬೆಂಗಳೂರು ಮಳೆ ಅವಾಂತರ
ರಾಜ್ಯ ರಾಜಧಾನಿಯಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದೆ. ನಗರದ ಫ್ರೀಡಂ ಪಾರ್ಕ್, ಕೆ.ಆರ್.ವೃತ್ತ, ಕಾರ್ಪೋರೇಷನ್ ವೃತ್ತ, ಮೈಸೂರು ರಸ್ತೆ, ಜಯನಗರ, ಲಾಲ್ ಬಾಗ್, ಮಲ್ಲೇಶ್ವರಂ, ಶಿವಾನಂದ ವೃತ್ತ, ಯಶವಂತಪುರ, ಇಂದಿರಾ ನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ.
ಮಳೆರಾಯನ ಅಬ್ಬರ
ನಗರದ ಫ್ರೀಡಂ ಪಾರ್ಕ್, ಕೆ.ಆರ್.ವೃತ್ತ, ಕಾರ್ಪೋರೇಷನ್ ವೃತ್ತ, ಮೈಸೂರು ರಸ್ತೆ, ಜಯನಗರ, ಲಾಲ್ ಬಾಗ್, ಮಲ್ಲೇಶ್ವರಂ, ಶಿವಾನಂದ ವೃತ್ತ, ಯಶವಂತಪುರ, ಇಂದಿರಾ ನಗರದಲ್ಲಿ ನಿನ್ನೆ ಮಳೆಯಾಗಿದೆ.
ಇನ್ನೂ ಎರಡು ದಿನ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.