ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜ.20ರಂದು ರಾಜಭವನ ಚಲೋ: ಸಿದ್ದರಾಮಯ್ಯ

ಕರ್ನಾಟಕ ಕಾಂಗ್ರೆಸ್ ಜನವರಿ 20ರಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನಾ ಮೆರವಣಿಗೆ ಮೂಲಕ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Raj Bhavan Chalo to condemn central government's anti-peasant policy  Siddaramaiah
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜ.20ಕ್ಕೆ ರಾಜಭವನ ಚಲೋ

By

Published : Jan 18, 2021, 11:50 AM IST

Updated : Jan 18, 2021, 12:46 PM IST

ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನಾ ಮೆರವಣಿಗೆ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜ.20ರಂದು ರಾಜಭವನ ಚಲೋ

ಈ ಸಂಬಂಧ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ದೇಶದ ಅನ್ನದಾತರು ಚಳಿ, ಗಾಳಿ ಎನ್ನದೇ, ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಹೋರಾಟ ‌ನಡೆಸುತ್ತಿದ್ದಾರೆ. 50 ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ರೈತರ ಈ ಹೋರಾಟವನ್ನು ಬೆಂಬಲಿಸಿ, ಅವರಿಗೆ ಶಕ್ತಿ ತುಂಬಲು ಕರ್ನಾಟಕ ಕಾಂಗ್ರೆಸ್ ಜನವರಿ 20ರಂದು 'ರಾಜಭವನ ಚಲೋ‌' ಹಮ್ಮಿಕೊಂಡಿದೆ ಎಂದಿದ್ದಾರೆ.

ಈ ಮೂಲಕ ಕೇಂದ್ರ ಸರ್ಕಾರದ ರೈತ ವಿರೋಧಿ ಕರಾಳ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ಪಕ್ಷದ ನಾಯಕರು, ಕಾರ್ಯಕರ್ತರು, ರೈತರು, ರೈತ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಓದಿ : ಗಡಿ ವಿಚಾರ ಎತ್ತುವುದು ಸರಿಯಲ್ಲ, ಮಹಾಜನ್ ವರದಿಯೇ ಅಂತಿಮ: ಡಿ.ಕೆ.ಶಿವಕುಮಾರ್

Last Updated : Jan 18, 2021, 12:46 PM IST

ABOUT THE AUTHOR

...view details