ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆ ಹಿನ್ನೆಲೆಯಲ್ಲಿ ನಾಳೆ ರಾಜಭವನದದಲ್ಲಿ ಪ್ರಮಾಣ ವಚನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 8 ರಿಂದ 2 ಗಂಟೆವರೆಗೂ ರಾಜಭವನ ರಸ್ತೆ ಬಂದ್ ಆಗಲಿದೆ.
ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ: ನಾಳೆ ಅರ್ಧ ದಿನ ರಾಜಭವನ ರಸ್ತೆ ಬಂದ್..! - ಪ್ರಮಾಣವಚನ ಕಾರ್ಯಕ್ರಮ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆ ಹಿನ್ನೆಲೆಯಲ್ಲಿ ನಾಳೆ ರಾಜಭವನದದಲ್ಲಿ ಪ್ರಮಾಣ ವಚನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 8 ರಿಂದ 2 ಗಂಟೆವರೆಗೂ ರಾಜಭವನ ರಸ್ತೆ ಬಂದ್ ಆಗಲಿದೆ.
ರಾಜಭವನದ ಗಾಜಿನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 20 ಮಂದಿ ಶಾಸಕರು ಸಚಿವರಾಗಿ ಅಧಿಕೃತವಾಗಿ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸೇರಿದಂತೆ ಗಣ್ಯಾತಿಗಣ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ರಾಜಭವನಕ್ಕೆ ದೌಡಾಯಿಸುವುದರಿಂದ ರಾಜಭವನದಲ್ಲಿ ಸಂಚಾರ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ಬೆಳಗ್ಗೆ 8 ರಿಂದ 2 ಗಂಟೆವರೆಗೆ ತಿಮ್ಮಯ್ಯ ರಸ್ತೆಯಿಂದ ರಾಜಭವನಕ್ಕೆ ಹೋಗುವ ವಾಹನ ಸವಾರರನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಪ್ರಮಾಣವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಾಳೆ ಸಾವಿರಾರು ಬಿಜೆಪಿ ಕಾರ್ಯಕರ್ತರು ದೌಡಾಯಿಸಲಿದ್ದಾರೆ. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ರಾಜಭವನ ಬಳಿ ಪ್ರತ್ಯೇಕ ಬ್ಯಾರಿಕೇಡ್ ಹಾಕಲಾಗಿದೆ. ಸುಮಾರು 10 ಸಾವಿರ ಮಂದಿ ಜನರು ಬರುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅನುವಾಗಲು ಎಲ್ ಇ ಡಿ ಪರದೆ ಹಾಕಲು ಸಿದ್ದತೆ ನಡೆಸಲಾಗಿದೆ.