ಕರ್ನಾಟಕ

karnataka

ETV Bharat / state

ಕಳಪೆ ಗುಣಮಟ್ಟದ ಮಾಸ್ಕ್, ಪಿಪಿಇ ಕಿಟ್; ಇಎಸ್​ಐ ವೈದ್ಯರು, ಸಿಬ್ಬಂದಿ ಪ್ರತಿಭಟನೆ... - ಕೊರೊನಾ

ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಕಳಪೆ ಗುಣಮಟ್ಟದ ಮಾಸ್ಕ್ ಹಾಗೂ ಪಿಪಿಇ ಕಿಟ್ ನೀಡಿದ್ದಾರೆಂದು ಆರೋಪಿಸಿ ವೈದ್ಯರು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ESI Hospital
ರಾಜಾಜಿನಗರ ಇಎಸ್​ಐ ಆಸ್ಪತ್ರೆ

By

Published : Apr 11, 2020, 5:15 PM IST

ಬೆಂಗಳೂರು: ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಕಳಪೆ ಗುಣಮಟ್ಟದ ಮಾಸ್ಕ್ ಹಾಗೂ ಪಿಪಿಇ ಕಿಟ್ ನೀಡಿದ್ದಾರೆಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ.

ಇಎಸ್​ಐ ವೈದ್ಯರ ಹಾಗೂ ಸಿಬ್ಬಂದಿಗಳ ಪ್ರತಿಭಟನೆ

ಇನ್ನು ಕಳಪೆ ಗುಣಮಟ್ಟದ ಬಗ್ಗೆ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್​ಗೆ ಹೇಳಿದ್ರೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಿಬ್ಬಂದಿಗಳು ಆರೋಪ ಮಾಡ್ತಿದ್ದಾರೆ. ಕೊರೊನಾ ರೋಗಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪಿಪಿಇ ಕಿಟ್ ಕೂಡ ಸರಿಯಾಗಿಲ್ಲ. ನಿಗಾ ವಹಿಸುವ ಸಿಬ್ಬಂದಿ ಕೂಡ ಇಲ್ಲ. ಅಲ್ಲದೇ‌ ಹೆಲ್ತ್ ವಾರಿಯರ್ಸ್​ಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ನಮ್ಮಲ್ಲಿ ಯಾರಾದ್ರು ಸಿಬ್ಬಂದಿಗೆ ಪಾಸಿಟಿವ್ ಬಂದರೆ ಆಮೇಲೆ ನೋಡೋಣ ಎಂಬ ಬೇಜವಾಬ್ದಾರಿ ಉತ್ತರ ಕೊಡುತ್ತಾರೆ. ಕೋವಿಡ್ -19ನಿಂದ ಮೃತಪಟ್ಟವರ ದೇಹವನ್ನ ಏನು ಮಾಡಬೇಕೆಂಬ ಮಾರ್ಗಸೂಚಿಯನ್ನು ಕೂಡ ಅನುಸರಿಸುತ್ತಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ABOUT THE AUTHOR

...view details