ಬೆಂಗಳೂರು:ನಗರದಲ್ಲಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಹೆಬ್ಬಗೋಡಿ ಠಾಣಾ ಪೊಲೀಸರು ಬಂಧಿಸಿ, ಸುಮಾರು 35 ಲಕ್ಷ ರೂ. ಮೌಲ್ಯದ 440 ಗ್ರಾಂ ತೂಕದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯು ರಾಜಸ್ಥಾನದ ಜಲೋರ್ ಜಿಲ್ಲೆಯವನಾಗಿದ್ದು, ಸುಮಾರು 1 ವರ್ಷದ ಹಿಂದೆ ಹೊಸಕೋಟೆ ಸ್ಟೀಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಕೋವಿಡ್ ಸಮಯದಲ್ಲಿ ರಾಜಸ್ಥಾನಕ್ಕೆ ಹೋಗಿ ಮತ್ತೆ ಒಂದು ತಿಂಗಳ ಹಿಂದೆ ವಾಪಸ್ ಬಂದು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿ ಬೊಮ್ಮಸಂದ್ರದ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದ.
ವಶಪಡಿಸಿಕೊಂಡ ಮಾದಕ ದ್ರವ್ಯ, ಮೊಬೈಲ್ ಇದೇ ವೇಳೆ ಆತ ಹೆರಾಯಿನ್ ಸೇರಿದಂತೆ ಮಾದಕ ದ್ರವ್ಯ ಮಾರಾಟ ದಂಧೆಯಲ್ಲಿ ತೊಡಗಿದ್ದ. ಬೊಮ್ಮಸಂದ್ರ ಹೀಲಲಿಗಿ ರಸ್ತೆಯ ಬಳಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸುಮಾರು 35 ಲಕ್ಷ ರೂ. ಮೌಲ್ಯದ 440 ಗ್ರಾಂ ತೂಕದ ಹೆರಾಯಿನ್, ಬೈಕ್, ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಮಾದಕ ದ್ರವ್ಯ ಮಾರಾಟ ಜಾಲ ಕುರಿತಂತೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಟೈರ್ ಸ್ಫೋಟಗೊಂಡು ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್... ಓರ್ವ ಸಾವು, ಮೂವರಿಗೆ ಗಂಭೀರ ಗಾಯ