ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಪ್ರತಿಭಟನಾನಿರತರಿಗೆ ಮಾರ್ಗ ಮಧ್ಯೆ ಪೊಲೀಸರು ತಡೆಯೊಡ್ಡಿದ್ದು, ವಶಕ್ಕೆ ಪಡೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಕಯ ಸಿದ್ದರಾಮಯ್ಯ ಹಾಗೂ ಪ್ರತಿಭನಾ ನಿರತರನ್ನು ಪೊಲೀಸರು ಮಹಾರಾಣಿ ಕಾಲೇಜು ಬಳಿ ವಶ ಪಡಿಸಿಕೊಂಡರು ವಶಕ್ಕೆ ಪಡೆದವರನ್ನು ಬಿಎಂಟಿಸಿ ಬಸ್ನಲ್ಲಿ ಕರೆದೊಯ್ದರು.
ಕಾಂಗ್ರೆಸ್ ‘ರಾಜಭವನ ಚಲೋ’- ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ - Bangalore Farmers protest live updates
15:27 January 20
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಕಯ ಸಿದ್ದರಾಮಯ್ಯ ಪೊಲೀಸ್ ವಶಕ್ಕೆ
15:11 January 20
ಪ್ರತಿಭಟನಾ ನಿರತರಲ್ಲಿ ಹಲವರನ್ನು ವಶಕ್ಕೆ ಪಡೆದ ಪೊಲೀಸರು
ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಪ್ರತಿಭಟನಾನಿರತರಲ್ಲಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಣಿ ಕಾಲೇಜು ಬಳಿ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
14:53 January 20
ರಾಜಭವನದತ್ತ ಪ್ರತಿಭಟನಾನಿರತರು
ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ಮುಕ್ತಾಯವಾಗಿದ್ದು, ಪ್ರತಿಭಟನಾನಿರತರು ರಾಜಭವನದತ್ತ ತೆರಳುತ್ತಿದ್ದಾರೆ.
14:45 January 20
ಜೈಲಿಗೆ ಹೋಗಲು ನಾವು ತಯಾರಿದ್ದೇವೆ - ಡಿಕೆಶಿ
ಫ್ರೀಡಂ ಪಾರ್ಕ್ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೂರು ಮರಣ ಶಾಸನಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರತಿಭಟನೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದಾರೆ. ಪ್ರಧಾನಮಂತ್ರಿ ಗಮನ ಸೆಳೆಯೊದಕ್ಕೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ನೆಡೆಯುತ್ತಿದೆ. ಇದೊಂದು ಐತಿಹಾಸಿಕ ಹೋರಾಟ, ಇತಿಹಾಸ ಪುಟದಲ್ಲಿ ಇಲ್ಲಿರುವವರು ಸೇರುತ್ತಿದ್ದೀರಿ ಎಂದು ಹೇಳಿದರು.
ದೇಶಕ್ಕೆ ಮಾಡಿದಂತಹ ತ್ಯಾಗ ಈ ಪ್ರತಿಭಟನೆ. ಜನರ ಭಾವನೆಯನ್ನು ಸರ್ಕಾರದ ಗಮನಕ್ಕೆ ತರಬೇಕೆಂದು ನಿರ್ಧರಿಸಿದ್ದೇವೆ. 20 ಲಕ್ಷ ಕೋಟಿಯಲ್ಲಿ ಎಷ್ಟು ರೈತರಿಗೆ, ಕಾರ್ಮಿಕರಿಗೆ, ನೊಂದವರಿಗೆ ಸಿಕ್ಕಿದೆ ಅಂತ ಯಡಿಯೂರಪ್ಪ ಹೇಳಬೇಕು. ಎಲ್ಲರೂ ಈ ಹೋರಾಟಕ್ಕೆ ಕೈಜೋಡಿಸಿದ್ದಾರೆ. ನಿಮ್ಮ ಧ್ವನಿ ಶಕ್ತಿ, ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ತಲುಪಿದೆ. ಈ ಕಾರ್ಯಕ್ರಮದ ನಂತರ ರಾಜಭವನ ಮುತ್ತಿಗೆ ಮಾಡುತ್ತೇವೆ. ಪೊಲೀಸರು ಬಂಧಿಸಿದರು ಜೈಲಿಗೆ ಹೋಗಲು ನಾವು ತಯಾರಿದ್ದೇವೆ ಎಂದು ತಿಳಿಸಿದರು.
13:03 January 20
ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ
ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ತಲುಪಿದ್ದು, ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಆ ನಂತರ ರಾಜಭವನದತ್ತ ತೆರಳಲಿದ್ದಾರೆ.
12:51 January 20
ರೈತರಿಗೆ ಬೆಂಗಳೂರಿಗೆ ಬರಲು ಅವಕಾಶ ನೀಡುತ್ತಿಲ್ಲ - ಡಿಕೆಶಿ
ಅವರು ನಮ್ಮ ರೈತರಿಗೆ ಬೆಂಗಳೂರಿಗೆ ಬರಲು ಅವಕಾಶ ನೀಡುತ್ತಿಲ್ಲ. ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಮಾತ್ರವಲ್ಲ, ರೈತ ಸಮುದಾಯವೂ ಇದನ್ನು ವಿರೋಧಿಸುತ್ತಿದೆ. ಅವರು ನಮ್ಮ ವಾಹನಗಳನ್ನು ರಸ್ತೆಗಳಲ್ಲಿ ನಿರ್ಬಂಧಿಸುತ್ತಿದ್ದಾರೆ. ಕಾಯ್ದೆ ರದ್ದುಗೊಳ್ಳುವವರೆಗೂ ನಾವು ಹೋರಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
12:37 January 20
ಫ್ರೀಡಂ ಪಾರ್ಕ್ ತಲುಪಿದ ಪ್ರತಿಭಟನಾ ಮೆರವಣಿಗೆ
ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಪ್ರತಿಭಟನಾ ರ‍್ಯಾಲಿಯಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ತಲುಪಿದೆ.
ಬಳಿಕ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಆ ನಂತರ ರಾಜಭವನದತ್ತ ತೆರಳಲು ಸಿದ್ಧತೆ ನಡೆದಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಫ್ರೀಡಂ ಪಾರ್ಕ್ ಸುತ್ತಮುತ್ತ 500ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
12:21 January 20
ಕಾಂಗ್ರೆಸ್ ಬೃಹತ್ ಪ್ರತಿಭಟನಾ ಮೆರವಣಿಗೆಯಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್
ಕಾಂಗ್ರೆಸ್ ಬೃಹತ್ ಪ್ರತಿಭಟನಾ ಮೆರವಣಿಗೆಯಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ, ಕಾಟನ್ ಪೇಟೆ ರಸ್ತೆ ಸೇರಿದಮತೆ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
12:15 January 20
ಆನಂದ್ ರಾವ್ ಸರ್ಕಲ್ ತಲುಪಿದ ಕಾಂಗ್ರೆಸ್ ಮೆರವಣಿಗೆ
ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲು ನಿಲ್ದಾಣದಿಂದ ಆರಂಭವಾದ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆನಂದ್ ರಾವ್ ಸರ್ಕಲ್ ತಲುಪಿದೆ.
12:09 January 20
ಟ್ರ್ಯಾಕ್ಟರ್ನಲ್ಲಿ ತೆರಳುತ್ತಿರುವ ಸಿದ್ದರಾಮಯ್ಯ, ಡಿಕೆಶಿ
ಬೆಂಗಳೂರು: ಕಾಂಗ್ರೆಸ್ನ ಪ್ರತಿಭಟನಾ ಮೆರವಣಿಗೆ ಆರಂಭವಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದಾರೆ.
11:57 January 20
ಎಪಿಎಂಸಿಗಳು ಮುಚ್ಚುತ್ತವೆ ಎಂದು ರಾಹುಲ್ ಗಾಂಧಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಬಿಜೆಪಿ ಟ್ವೀಟ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪ್ರಶ್ನೆಗಳಿಗೆ ಯುವರಾಜ ರಾಹುಲ್ ಗಾಂಧಿ ಉತ್ತರಿಸುವರೇ!!? ಎಪಿಎಂಸಿಗಳು ಮುಚ್ಚುತ್ತವೆ ಎಂದು ರಾಹುಲ್ ಗಾಂಧಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಎಪಿಎಂಸಿ ಕಾಯ್ದೆಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾಂಗ್ರೆಸ್ ಪ್ರಣಾಳಿಕೆಯ ಭಾಗವಾಗಿರಲಿಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.
11:55 January 20
ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಅಸಮಾಧಾನ
ಧಾರವಾಡದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಯಮನಂತೆ ಎರಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಲು ಅಂದಿನ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡಿತ್ತು. ಅದೇ ರೈತ ವಿರೋಧಿ ಕಾಂಗ್ರೆಸ್ ಇಂದು ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ರಾಜಭವನ ಚಲೋ ಎಂಬುದು ಕಾಂಗ್ರೆಸ್ ಅಸ್ತಿತ್ವದ ಹೋರಾಟವೇ ಹೊರತು ರೈತಪರ ಹೋರಾಟವಲ್ಲ. ಅಂದು ಹಸಿರು ಶಾಲು ಹಾಕಿಕೊಂಡು ತಾವು ರೈತಪರ ಎಂದು ಬೊಗಳೆಬಿಟ್ಟ ಕಾಂಗ್ರೆಸ್ ಪಕ್ಷದ ನಾಯಕರು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿದ್ದರು. ಇವತ್ತು ಚಿನ್ನದ ತಟ್ಟೆಯಲ್ಲಿ ಊಟ ಮಾಡುವಿರಾ !!? ಎಂದು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಯಮನೂರು ರೈತರ ಮೇಲೆ ಹಲ್ಲೆ ಮಾಡುವ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುವ ದೃಶ್ಯಗಳನ್ನು ಪೋಸ್ಟ್ ಮಾಡಿದೆ.
11:44 January 20
ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನಾ ರ‍್ಯಾಲಿ ಆರಂಭ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆಗೆ ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಮತ್ತಿತರ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರನ್ನು ಒಳಗೊಂಡ ಪ್ರತಿಭಟನಾ ಮೆರವಣಿಗೆ ಚಾಲನೆ ಸಿಕ್ಕಿತು. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಸಾಗಿ ಕಾಂಗ್ರೆಸ್ ಭವನ ತಲುಪಿ ಅಲ್ಲಿಂದ ಇನ್ನಷ್ಟು ಕಾರ್ಯಕರ್ತರೊಂದಿಗೆ ಫ್ರೀಡಂ ಪಾರ್ಕ್ ಕಡೆ ಪ್ರಯಾಣ ಬೆಳೆಸಲಿದೆ.
ಕಾಂಗ್ರೆಸ್ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರನ್ನು ಒಳಗೊಂಡಂತಹ ಬೃಹತ್ ಮೆರವಣಿಗೆಯಲ್ಲಿ ಪಕ್ಷದ ಬಾವುಟ ಹಾಗೂ ಹಸಿರು ಶಾಲು ಹೆಚ್ಚಾಗಿ ಗಮನ ಸೆಳೆದಿವೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
11:37 January 20
ಪ್ರತಿಭಟನಾ ನಿರತರಿಂದ ಕಿಕ್ಕಿರಿದ ರೈಲ್ವೆ ನಿಲ್ದಾಣದ ಮುಂಭಾಗದ ರಸ್ತೆ
ರೈಲ್ವೆ ನಿಲ್ದಾಣದ ಮುಂಭಾಗದ ರಸ್ತೆ ಮಾರ್ಗದಲ್ಲಿ ಪ್ರತಿಭಟನೆಯಿಂದಾಗಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ. ಸದಾ ವಾಹನಗಳಿಂದಲೇ ತುಂಬಿರುತ್ತಿದ್ದ ಈ ರಸ್ತೆ ಜನರಿಂದ ಕಿಕ್ಕಿರಿದಿದೆ. ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.
11:26 January 20
ಪ್ರತಿಭಟನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮನ
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಮೌರ್ಯ ವೃತ್ತದಿಂದ ಫ್ರೀಡಂ ಪಾರ್ಕ್ ಕಡೆ ಕಾಂಗ್ರೆಸ್ ಕಾರ್ಯಕರ್ತರು ಹೊರಟಿದ್ದಾರೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಎಸ್.ಆರ್.ಪಾಟೀಲ್, ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ ಮತ್ತಿತರ ನಾಯಕರು ಆಗಮಿಸಿದ್ದಾರೆ.
11:00 January 20
ಕಾಂಗ್ರೆಸ್ನಿಂದ ‘ರಾಜಭವನ ಚಲೋ’
ಬೆಂಗಳೂರು:ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಪೊಲೀಸರು ಪರ್ಯಾಯ ಮಾರ್ಗಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ.
ಕಾರ್ಪೊರೇಷನ್, ವಿಧಾನಸೌಧ, ಬನಶಂಕರಿಯತ್ತ ತೆರಳುವ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ.