ಬೆಂಗಳೂರು:ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂಬ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೇಳಿಕೆ ಎಲ್ಲೆಡೆ ಚರ್ಚೆಯಾಗುತ್ತಿರುವಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿವಾದಿತ ಟ್ವೀಟ್ ಮಾಡಿದ್ದಾರೆ.
ಗೋಡ್ಸೆಗಿಂತ ರಾಜೀವ್ ಗಾಂಧಿ ಕ್ರೂರ... ವಿವಾದವಾಯ್ತು ನಳಿನ್ ಕಟೀಲ್ ಟ್ವೀಟ್ - Rajiv gandhi cruel than Godse... MP Nalin kumar kateel tweet
ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಹೇಳಿಕೆ ಎಲ್ಲೆಡೆ ಚರ್ಚೆಯಾಗುತ್ತಿರುವಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿವಾದಿತ ಟ್ವೀಟ್ ಮಾಡಿದ್ದಾರೆ.

ನಳಿನ್ ಕಟೀಲ್
ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? ಎಂದು ನಿಳಿನ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ವಿವಾದದ ಸ್ವರೂಪ ಪಡೆದುಕೊಂಡಿದೆ.
ತಮಿಳುನಾಡಿನಲ್ಲಿ ಪ್ರಚಾರ ಕೈಗೊಂಡಿದ್ದ ಕಮಲ್ ಹಾಸನ್ ಅವರು ನಾಥುರಾಮ್ ಗೊಡ್ಸೆ ಭಯೋತ್ಪಾದಕ ಎಂದಿದ್ದರು. ಈ ಕುರಿತು ಪರ-ವಿರೋಧದ ಚರ್ಚೆ ನಡೆಯುತ್ತಿದೆ.