ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿವಿ 25 ನೇ ಸಂಸ್ಥಾಪನಾ ದಿನಾಚರಣೆ ಮತ್ತು ರಜತ ಮಹೋತ್ಸವ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ಆನ್ಲೈನ್ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲ ಉಪಸ್ಥಿತರಿದ್ದರು. ಕೊರೊನಾ ಸುರಕ್ಷತೆ ದೃಷ್ಟಿಯಿಂದ ಕೈಗೆ ಗ್ಲೌಸ್, ಮುಖಕ್ಕೆ ಮಾಸ್ಕ್ ಹಾಕಿ ರಾಜ್ಯಪಾಲರು ಆಗಮಿಸಿದ್ದರು.
ರಾಜೀವ್ ಗಾಂಧಿ ಆರೋಗ್ಯ ವಿವಿಯ ರಜತ ಮಹೋತ್ಸವ ಕೊರೊನಾ ನಿಯಂತ್ರಣ ಮಾಡಿದ ಸಿಎಂಗೆ ಮೋದಿ ಶ್ಲಾಘನೆ:
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಶ್ಲಾಘಿಸಿದರು. ಪ್ರಪಂಚ ಎರಡು ವಿಶ್ವ ಯುದ್ಧಗಳ ಬಳಿಕ ಮತ್ತೊಂದು ಬಹುದೊಡ್ಡ ಯುದ್ಧ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ನೇತೃತ್ವದ ತಂಡ ಸಮರ್ಥವಾಗಿ ಪರಿಸ್ಥಿತಿಯನ್ನು ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಾವು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆಯೂ ಯೋಚಿಸಬೇಕಿದೆ. ಇಡೀ ಪ್ರಪಂಚದಲ್ಲಿ ಇಂತಹ ಸಂದರ್ಭಗಳಲ್ಲಿ ಮಾನವಿಯ ನೆಲೆಯಲ್ಲಿ ಅಭಿವೃದ್ಧಿ ಬಗ್ಗೆ ಯೋಚಿಸಬೇಕಾಗಿದೆ, ಕೊರೊನಾ ಬಗ್ಗು ಬಡೆಯುವಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಸೈನಿಕರಿದ್ದಂತೆ. ಕೊರೊನಾ ಇಂಡಿವಿಜ್ಯುಲ್ ಎನಿಮಿ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ವಿವಿಯ ಕುಲಪತಿ ಸಚ್ಚಿದಾನಂದ ಭಾಗಿಯಾಗಿದ್ದರು.