ದೇವನಹಳ್ಳಿ: ಕನ್ನಡ ಚಲನಚಿತ್ರದ ಮೇರು ನಟ ಪದ್ಮಭೂಷಣ ಡಾ. ರಾಜ್‍ಕುಮಾರ್ ಅವರ 92 ನೇ ಜನ್ಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿ ಅಣ್ಣಾವ್ರ ಹುಟ್ಟುಹಬ್ಬ ಆಚರಣೆ - ಕೊರೊನಾ ವೈರಾಣು
ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ ಕುಮಾರ್ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು.
ಅಣ್ಣಾವ್ರ 92 ನೇ ಜಯಂತಿಯ
ಕರ್ನಾಟಕ ರತ್ನ, ಡಾ. ರಾಜ್‍ಕುಮಾರ್ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್. ಕೆ. ನಾಯಕ್ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಎನ್.ಎಸ್. ಮಹೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾರ್ತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.