ಬೆಂಗಳೂರು: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1 ರಂದು ಉಪಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂಕೆ ವಿಶಾಲಾಕ್ಷಿ ತಿಳಿಸಿದ್ದಾರೆ.
ಡಿಸೆಂಬರ್ 1 ರಂದು ರಾಜ್ಯಸಭೆ ಉಪಚುನಾವಣೆ: ಚುನಾವಣಾಧಿಕಾರಿ ಎಂಕೆ ವಿಶಾಲಾಕ್ಷಿ - ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ
ನ. 18 ರವರೆಗೆ ನಾಮಪತ್ರಗಳ ಸಲ್ಲಿಸಬಹುದಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನ.23 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಡಿ.1 ರಂದು ಉಪಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾಳೆ ಚುನಾವಣೆಗೆ ನೋಟಿಫಿಕೇಷನ್ ಹೊರಡಿಸಲಾಗುತ್ತದೆ. ನ. 18 ರವರೆಗೆ ನಾಮಪತ್ರಗಳ ಸಲ್ಲಿಸಬಹುದಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನ.23 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಡಿ.1 ರಂದು ಉಪಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106 ರಲ್ಲಿ, ಡಿ.1 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ವಿಧಾನಸಭೆಗೆ ಚುನಾಯಿತಗೊಂಡಿರುವ ಸದಸ್ಯರು ಮತದಾರರಾಗಿದ್ದಾರೆ ಎಂದು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಗೊಂಡ ದಿನದಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ನಾಮಪತ್ರ ಸಲ್ಲಿಕೆ ವೇಳೆ ಗರಿಷ್ಠ ಇಬ್ಬರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ. ಚುನಾವಣಾಧಿಕಾರಿಯ ಕಚೇರಿ ಸಂಪರ್ಕಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛಗೊಳಿಸುವ ವ್ಯವಸ್ಥೆ ಮಾಡಲಾಗುವುದು. ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಬೇಕು. ಅಲ್ಲದೇ, ನಾಮಪತ್ರ ಸಲ್ಲಿಕೆ ವೇಳೆ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದರು.