ಬೆಂಗಳೂರು :ರಾಜ್ಯಸಭೆ ಚುನಾವಣೆಗೆ ಜೆಡಿಎಸ್ನಿಂದ ಅಧಿಕೃತ ಅಭ್ಯರ್ಥಿಯಾಗಿರುವ ಡಿ.ಕುಪೇಂದ್ರರೆಡ್ಡಿ ಅವರಿಗೆ ಮತ ನೀಡುವಂತೆ ಜೆಡಿಎಸ್ ಶಾಸಕರಿಗೆ ವಿಪ್ ಜಾರಿಗೊಳಿಸಲಾಗಿದೆ. ಜೂನ್ 10ರಂದು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ-106ರಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ರಾಜ್ಯಸಭೆ ಚುನಾವಣೆ ಹಿನ್ನೆಲೆ : ಜೆಡಿಎಸ್ ಶಾಸಕರಿಗೆ ವಿಪ್ ಜಾರಿ
ರಾಜ್ಯಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್ ಶಾಸಕರಿಗೆ ವಿಪ್ ಜಾರಿಗೊಳಿಸಲಾಗಿದೆ. ಡಿ.ಕುಪೇಂದ್ರರೆಡ್ಡಿ ಜೆಡಿಎಸ್ನ ಅಧಿಕೃತ ಅಭ್ಯರ್ಥಿಯಾಗಿದ್ದಾರೆ..
ಜೆಡಿಎಸ್
ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಶಾಸಕರು ಮತ ಚಲಾಯಿಸಬೇಕೆಂದು ಜೆಡಿಎಸ್ ಸಚೇತಕ ವೆಂಕಟರಾವ್ ನಾಡಗೌಡ ಪಕ್ಷದ ವತಿಯಿಂದ ವಿಪ್ ನೀಡಿದ್ದಾರೆ. ಶಾಸಕರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ವಿಪ್ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ:ಎರಡು ಪಕ್ಷದ ಆತ್ಮಸಾಕ್ಷಿ ಮತಗಳು ಕಾಂಗ್ರೆಸ್ಗೆ ಬರುತ್ತವೆ : ಸಿದ್ದರಾಮಯ್ಯ ವಿಶ್ವಾಸ