ಕರ್ನಾಟಕ

karnataka

ETV Bharat / state

ರಾಜ್ಯಸಭೆ ಚುನಾವಣೆ: ನಾಳೆ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ - ರಾಜ್ಯಸಭೆ ಚುನಾವಣೆ

ರಾಜ್ಯಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ವಿಧಾನಸೌಧದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

rajya-sabha-elections-ban-on-public-entry-in-vidhana-soudha
ರಾಜ್ಯಸಭೆ ಚುನಾವಣೆ: ನಾಳೆ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

By

Published : Jun 9, 2022, 9:34 PM IST

ಬೆಂಗಳೂರು:ನಾಳೆ ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಚುನಾವಣೆ ಕಾರಣ ಹಲವು ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವಾಲಯದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ಕಚೇರಿಗೆ ಆಗಮಿಸಲು ಸೂಚಿಸಲಾಗಿದೆ. ಉಪ ಪೊಲೀಸ್‌ ಆಯುಕ್ತರು ಹಾಗೂ ಭದ್ರತಾಧಿಕಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಪರಿಶೀಲಿಸಿ ಪ್ರವೇಶ ನೀಡಲು ಕ್ರಮ ವಹಿಸಲು ತಿಳಿಸಲಾಗಿದೆ.

ಅದೇ ರೀತಿ ಸಚಿವರು ಹಾಗೂ ಶಾಸಕರೊಂದಿಗೆ ಆಗಮಿಸುವ ಗನ್ ಮ್ಯಾನ್ ಮತ್ತು ಅವರ ಆಪ್ತ ಸಹಾಯಕರಿಗೆ ನಾಳೆ ವಿಧಾನಸೌಧದ ಒಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ:ಕುತೂಹಲಕರ ಘಟ್ಟಕ್ಕೆ ರಾಜ್ಯಸಭೆ ಚುನಾವಣಾ ಕಣ: ಜೆಡಿಎಸ್‍-ಕಾಂಗ್ರೆಸ್ ಹಗ್ಗಜಗ್ಗಾಟ ಬಿಜೆಪಿಗೆ ಲಾಭ?

ABOUT THE AUTHOR

...view details