ಬೆಂಗಳೂರು: ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರ ನಿಧನಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಮರ್ ಸಿಂಗ್ ನಿಧನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಂತಾಪ - HD Deve Gowda condolences
ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಇಂದು ಮೃತರಾಗಿದ್ದು, ಸಿಂಗ್ ಸಾವಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಸಂತಾಪ ಸೂಚಿಸಿದ್ದಾರೆ.

ಅಮರ್ ಸಿಂಗ್
ಅಮರ್ ಸಿಂಗ್ ಅವರೊಬ್ಬ ಸ್ನೇಹಜೀವಿ. ಸ್ನೇಹಿತನ ಅಗಲಿಕೆಯಿಂದ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದಿದ್ದಾರೆ.