ಬೆಂಗಳೂರು: ಐತಿಹಾಸಿಕ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರಕಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆ ಅಂಗೀಕಾರ: ಮೋದಿ ಸರ್ಕಾರಕ್ಕೆ ಬಿಎಸ್ವೈ ಅಭಿನಂದನೆ
ಐತಿಹಾಸಿಕ ತ್ರಿವಳಿ ತಲಾಖ್ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತ್ರಿವಳಿ ತಲಾಖ್ ಮಸೂದೆ
ಮುಸ್ಲಿಂ ಮಹಿಳೆಯರ ಘನತೆಯನ್ನು ಕಾಪಾಡುವುದು ಮತ್ತು ಅವರಿಗೆ ಸಾಮಾಜಿಕ ನ್ಯಾಯ ಒದಗಿಸುವುದು ಮೋದಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಈ ಪ್ರಚಂಡ ಪ್ರಯತ್ನ ಸಬ್ ಕಾ ಸಾಥ್ - ಸಬ್ ಕಾ ವಿಕಾಸ್ ನ ಪ್ರತಿಬಿಂಬವಾಗಿದೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ತ್ರಿಬಲ್ ತಲಾಖ್ ಬಿಲ್ ಮಸೂದೆ ಅಂಗೀಕಾರಗೊಂಡಿದ್ದು, ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಇದೆ.