ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ರನ್ನು ಬಿಡಿಎ ಸೇರಿ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ರಾಕೇಶ್ ಸಿಂಗ್ ಬಿಬಿಎಂಪಿ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಅವರನ್ನು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಬಿಡಿಎ ಸೇರಿ 10 ಯೋಜನಾ ಪ್ರಾಧಿಕಾರಗಳ ನೂತನ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ - ಈಟಿವಿ ಭಾರತ ಕನ್ನಡ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕೆಳಕಂಡ ಪ್ರಾಧಿಕಾರಗಳಿಗೆ ರಾಕೇಶ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ.
1. ಆನೇಕಲ್ ಯೋಜನಾ ಪ್ರಾಧಿಕಾರ
2. ಹೊಸಕೋಟೆ ಯೋಜನಾ ಪ್ರಾಧಿಕಾರ
3. ಬೆಂಗಳೂರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ
ಯೋಜನಾ ಪ್ರಾಧಿಕಾರ
4. ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ
5. ಮಾಗಡಿ ಯೋಜನಾ ಪ್ರಾಧಿಕಾರ
6. ಚನ್ನಪಟ್ಟಣ ಯೋಜನಾ ಪ್ರಾಧಿಕಾರ
7. ಕನಕಪುರ ಯೋಜನಾ ಪ್ರಾಧಿಕಾರ
8. ನೆಲಮಂಗಲ ಯೋಜನಾ ಪ್ರಾಧಿಕಾರ
9. ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
10. ಗ್ರೇಟರ್ ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿ ಯೋಜನಾ ಪ್ರಾಧಿಕಾರ
ಇದನ್ನೂ ಓದಿ:ಜಾತಿ ಗಣತಿ ಮೂಲಕ ಒಕ್ಕಲಿಗ, ಲಿಂಗಾಯತ ಸಮುದಾಯವನ್ನು ತುಳಿಯಲು ಹೊರಟಿದೆ ಕಾಂಗ್ರೆಸ್: ಆರ್ ಅಶೋಕ್