ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ ಹಾಗೂ ರಾಮಲಿಂಗಾರೆಡ್ಡಿ ಅವರ ಅಧಿಕೃತ ಪದಗ್ರಹಣ ಸಮಾರಂಭ ಇಂದು ನಗರದಲ್ಲಿ ನಡೆಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ಹಾಗೂ ಧ್ರುವನಾರಾಯಣ ಅಧಿಕೃತ ಪದಗ್ರಹಣ ನಗರದ ಮಲ್ಲೇಶ್ವರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಇಬ್ಬರು ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರ ದಾನ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ, ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿನೇಶ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಮಾಜಿ ಸಚಿವರು, ಶಾಸಕರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ರಾಮಲಿಂಗಾರೆಡ್ಡಿ ಹಾಗೂ ಧ್ರುವನಾರಾಯಣ ಪಕ್ಷದ ಕಾರ್ಯಾಧ್ಯಕ್ಷರಾಗಿ ಅಧಿಕೃತವಾಗಿ ಪ್ರಮಾಣ ಸ್ವೀಕಾರ ಮಾಡಿದರು.
ಓದಿ: 'ಗ್ರಾಮ ವಾಸ್ತವ್ಯ' ವೇಳೆ ಕುಣಿದು ಕುಪ್ಪಳಿಸಿದ ಅಧಿಕಾರಿಗಳು
ಈಗಾಗಲೇ ಪಕ್ಷದ ಕಾರ್ಯಾಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಹಾಗೂ ಸಲೀಂ ಅಹಮದ್ ಕಳೆದ ವರ್ಷ ಜುಲೈ 2 ರಂದು ಅಧಿಕೃತವಾಗಿ ಪದಗ್ರಹಣ ಮಾಡಿದ್ದು, ಕಳೆದ ತಿಂಗಳು ನೇಮಕಗೊಂಡ ಇಬ್ಬರು ನಾಯಕರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸಮಾರಂಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.