ಬೆಂಗಳೂರು :ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಮಲಿಂಗಾರೆಡ್ಡಿ ಹಾಗೂ ಧೃವನಾರಾಯಣ ಅಧಿಕೃತ ಪದಗ್ರಹಣ ಸಮಾರಂಭ ಫೆ.21ರಂದು ನಡೆಯಲಿದೆ.
ಓದಿ: ಕಣಿವೆ ನಾಡಿನಲ್ಲಿ ಬ್ರೇಕ್ ಫೇಲ್, ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್: ನಾಲ್ವರ ಸಾವು!
ಬೆಂಗಳೂರು :ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಮಲಿಂಗಾರೆಡ್ಡಿ ಹಾಗೂ ಧೃವನಾರಾಯಣ ಅಧಿಕೃತ ಪದಗ್ರಹಣ ಸಮಾರಂಭ ಫೆ.21ರಂದು ನಡೆಯಲಿದೆ.
ಓದಿ: ಕಣಿವೆ ನಾಡಿನಲ್ಲಿ ಬ್ರೇಕ್ ಫೇಲ್, ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್: ನಾಲ್ವರ ಸಾವು!
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಸಚಿವ ರಾಮಲಿಂಗರೆಡ್ಡಿ ಹಾಗೂ ಮಾಜಿ ಸಂಸದ ಧೃವನಾರಾಯಣರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಇವರ ಅಧಿಕೃತ ಪದಗ್ರಹಣ ಸಮಾರಂಭ ಫೆಬ್ರುವರಿ 21ರಂದು ಬೆಳಗ್ಗೆ 11ಗಂಟೆಗೆ ರಮಣಮಹರ್ಷಿ ರಸ್ತೆಯ ಅರಮನೆ ಮೈದಾನದ ಕಿಂಗ್ಸ್ ಕೋರ್ಟ್ (ಗೇಟ್ ನಂ.5) ರಲ್ಲಿ ತಮ್ಮ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಸಿಡಬ್ಯುಸಿ ಸದಸ್ಯರು, ಎಐಸಿಸಿ ಪದಾಧಿಕಾರಿಗಳು, ಸಂಸದರು, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ, ವಿಭಾಗ, ಸೆಲ್‌ಗಳ ಅಧ್ಯಕ್ಷರು/ಪದಾಧಿಕಾರಿಗಳು, ಬಿಬಿಎಂಪಿ ಮಾಜಿ ಸದಸ್ಯರುಗಳು ಹಾಗೂ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ.
ಪಕ್ಷದ ಕೆಲ ಮುಖಂಡರು, ಕಾರ್ಯಕರ್ತರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ರಾಷ್ಟ್ರೀಯ ನಾಯಕರನ್ನು ಸಹ ಸಮಾರಂಭಕ್ಕೆ ಬರುವಂತೆ ಕೋರಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪಾಲ್ಗೊಳ್ಳುವ ನಿರೀಕ್ಷೆ ಇದೆ.