ಕರ್ನಾಟಕ

karnataka

ETV Bharat / state

ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಪತ್ತೆಗಾಗಿ ಕೇರಳಕ್ಕೆ ತೆರಳಿದ ಸ್ಪೆಷಲ್ ಟೀಂ - Sexual harassment of a Bangladeshi-based woman in Bangalore case

ಬಾಂಗ್ಲಾದೇಶದ ಯುವತಿಗೆ ಸ್ನೇಹಿತರೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧನ ಮಾಡಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಯುವತಿಯನ್ನು ಆರೋಪಿಗಳು ಕೇರಳಕ್ಕೆ ಕರೆದುಕೊಂಡು ಹೋಗಿರುವ ಮಾಹಿತಿ ಆಧರಿಸಿ ರಾಮಮೂರ್ತಿ ನಗರ ಪೊಲೀಸರ ವಿಶೇಷ ತಂಡವು ಸಂತ್ರಸ್ತೆ ಪತ್ತೆಗಾಗಿ ಕೇರಳಕ್ಕೆ ಹೋಗಿದೆ.

Sexual harassment of a Bangladeshi-based woman in Bangalore case
ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ

By

Published : May 28, 2021, 11:52 AM IST

ಬೆಂಗಳೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ರಾಮಮೂರ್ತಿ ನಗರ ಪೊಲೀಸರ ವಿಶೇಷ ತಂಡವು ಸಂತ್ರಸ್ತೆ ಪತ್ತೆಗಾಗಿ ಕೇರಳಕ್ಕೆ ಹೋಗಿದೆ. ಯುವತಿಯನ್ನು ಆರೋಪಿಗಳು ಕೇರಳಕ್ಕೆ ಕರೆದುಕೊಂಡು ಹೋಗಿರುವ ಮಾಹಿತಿ ಆಧರಿಸಿ ವಿಶೇಷ ತಂಡ ತೆರಳಿದೆ.

ಸಂತ್ರಸ್ತೆ ಹಾಗೂ ಬಂಧಿತ ಆರೋಪಿಗಳು ಪರಿಚಯಸ್ಥರಾಗಿದ್ದರು. ಅಕ್ರಮವಾಗಿ ಬಾಂಗ್ಲಾದಿಂದ ಭಾರತಕ್ಕೆ ನುಸುಳಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಎಲ್ಲರೂ ಒಟ್ಟಿಗೆ ಮಾಂಸ ದಂಧೆ ನಡೆಸುತ್ತಿದ್ದರು.‌ ಈ ನಡುವೆ ಸಂತ್ರಸ್ತೆ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರಕ್ಕೆ ಗಲಾಟೆಯಾಗಿದೆ‌. ಬಳಿಕ ಸಂತ್ರಸ್ತೆಯು ತನ್ನ ಜೊತೆಗೆ ಇನ್ನೂ ಇಬ್ಬರು ಯುವತಿಯರನ್ನು ಕರೆದುಕೊಂಡು ಕೇರಳಕ್ಕೆ ಹೋಗಿದ್ದಳು ಎನ್ನಲಾಗಿದೆ. ಬಳಿಕೆ ಈಕೆಯನ್ನು ಆರೋಪಿಗಳು ವಾಪಸ್ ಕರೆಸಿಕೊಂಡಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ 'ನಿರ್ಭಯಾ' ರೀತಿಯ ಲೈಂಗಿಕ ದೌರ್ಜನ್ಯ ಕೇಸ್‌: ಪರಾರಿಗೆ ಯತ್ನಿಸಿದ ಆರೋಪಿಗಳಿಗೆ ಗುಂಡು

ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್​​ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ‌‌‌. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು. ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣ‌ದ ಮೊದಲ ಆರೋಪಿ ರಿದಾಯ್ ಬಾಬು ಸೂಚನೆಯಂತೆ ಉಳಿದ ಆರೋಪಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಯುವತಿಯ ವೈಯಕ್ತಿಕ ಭಾಗಕ್ಕೆ ಕಾಲಿನಿಂದ ಒದ್ದು ಮತ್ತು ಮದ್ಯದ ಬಾಟಲಿ ತುರುಕಿ ವಿಕೃತಿ ಮೆರೆದಿದ್ದರು ಎನ್ನಲಾಗಿದೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಲೈಂಗಿಕ ದೌರ್ಜನ್ಯ ವಿಡಿಯೋ ಸೆರೆ ಹಿಡಿದುಕೊಂಡಿದ್ದ ಬಂಧಿತರಲ್ಲಿ ಓರ್ವ ಯುವತಿಯ ಮೊಬೈಲ್​ನಿಂದಲೇ ಬಹಿರಂಗವಾಗಿದೆ. ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸೋಂ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಬಾಂಗ್ಲಾ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು‌. ಆ ಬಳಿಕ ಸಂತ್ರಸ್ತೆ ಕುಟುಂಬದ ಸದಸ್ಯರನ್ನ ಪತ್ತೆ ಮಾಡಿದ್ದ ಬಾಂಗ್ಲಾ ಪೊಲೀಸರು, ಕೃತ್ಯವೆಸಗಿದ ಸ್ಥಳ ಆಧರಿಸಿ ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.‌ ಘಟನೆ ಸಂಬಂಧ ಆರು ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ‌.

ಇದನ್ನೂ ಓದಿ:ಬೆಂಗಳೂರಲ್ಲಿ ಯುವತಿಗೆ ಸ್ನೇಹಿತರಿಂದಲೇ ಲೈಂಗಿಕ ಕಿರುಕುಳ ಪ್ರಕರಣ: ವಿಕೃತ ಪಾಪಿಗಳಿಗೆ ಫುಲ್ ಡ್ರಿಲ್​

ಹೆದರಿಸುವ ಉದ್ದೇಶದಿಂದ ವಿಡಿಯೋ:

ಹಣಕಾಸಿನ ವಿಚಾರಕ್ಕಾಗಿ ನಡೆದಿದ್ದ ಆರೋಪಿಗಳ ನಡುವೆ ಗಲಾಟೆ ನಡೆದಿತ್ತು. ಸಂತ್ರಸ್ತೆ ಮೇಲೆ ನಡೆಸಿದ್ದ ಲೈಂಗಿಕ ದೌರ್ಜನ್ಯ ವಿಡಿಯೋ ಸೆರೆ ಹಿಡಿದುಕೊಂಡಿದ್ದರು‌. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ್ದರು ಎಂಬುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಬಂಧಿತರ ಸಂಖ್ಯೆ ಆರಕ್ಕೆ ಏರಿಕೆ:

ಪ್ರಕರಣದಲ್ಲಿ ಇದುವರೆಗೆ ಇಬ್ಬರು ಮಹಿಳೆಯರು ಸೇರಿ ಆರು ಜನರನ್ನು ಬಂಧಿಸಲಾಗಿದೆ. ಸಾಗರ್, ಮೊಹಮ್ಮದ್ ಬಾಬಾ, ಶೇಕ್, ರಿದಾಯ್ ಬಾಬು ಹಾಗೂ ಕಾಜಲ್, ನಸ್ರತ್ ಎಂಬ ಇಬ್ಬರು ಮಹಿಳೆಯರು ಸೇರಿ 6 ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ಗ್ಯಾಂಗ್ ರೇಪ್ ಅಮಾನುಷ ಕೃತ್ಯ, ಸೂಕ್ತ ಕ್ರಮಕ್ಕೆ ಸೂಚಿಸುತ್ತೇನೆ: ಸಿಎಂ ಬಿಎಸ್​​​ವೈ

ABOUT THE AUTHOR

...view details