ಬೆಂಗಳೂರು: ವಿಧಾನಪರಿಷತ್ ಚುನಾವಣೆ ನಡೆಯುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ತೆರಳಿ ಸಭೆ ನಡೆಸದಂತೆ ನಿರ್ಬಂಧ ಹೇರಬೇಕು ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಮನವಿ ಮಾಡಿದ್ದಾರೆ.
ಸಚಿವ ಅಶ್ವಥ್ ನಾರಾಯಣ್ ಪ್ರಚಾರ ನಡೆಸದಂತೆ ಚು.ಆಯೋಗ ನಿರ್ಬಂಧಿಸಲಿ: ರಮೇಶ್ ಬಾಬು - State legislative assembly elections
ಚುನಾವಣಾ ಆಯೋಗದ ಮುಖ್ಯಸ್ಥರು ಸಚಿವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಜತೆಗೆ ನಾಲ್ಕು ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದಂತೆ ನಿರ್ಬಂಧ ಹಾಕಬೇಕು ಎಂದು ರಮೇಶ್ ಬಾಬು ಒತ್ತಾಯಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಎರಡು ಪಧವಿಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ದಕ್ಷಿಣ ಪದವೀಧರರ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಮಾಡುತ್ತಿದ್ದು, ಮೇ 12ರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಮಂಡ್ಯದ ನಾಲ್ಕೈದು ಕಾಲೇಜುಗಳಿಗೆ ಭೇಟಿ ನೀಡಿ ಸಭೆ ಮಾಡಿ ಬಿಜೆಪಿಗೆ ಮತ ನೀಡುವಂತೆ ಪ್ರಚೋದನೆ ಮಾಡಿದ್ದಾರೆ. ಈ ಸಂಬಂಧ ಮಂಡ್ಯ ಕಾಂಗ್ರೆಸ್ ನಾಯಕರು ದೂರು ನೀಡಿದ ಆಧಾರದ ಮೇಲೆ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಅವರು ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳೆದ 20ರಂದು ವರದಿ ಸಲ್ಲಿಸಿದ್ದಾರೆ. ಸಚಿವರು ಸಭೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿರುವುದು ನಿಜ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದರು.
ಇದನ್ನೂ ಓದಿ:ಡಿಕೆಶಿ ಸದ್ಯವೇ ಜೈಲಿಗೆ ಹೋಗಲಿದ್ದಾರೆ : ರಾಜ್ಯ ಬಿಜೆಪಿ ವಕ್ತಾರ ಎಂ. ಜಿ ಮಹೇಶ್