ಕರ್ನಾಟಕ

karnataka

ETV Bharat / state

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ

ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೊದಲಿದ್ದ ಡ್ಯಾನಿಶ್ ಅಲಿ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಅವರು ಬಿಎಸ್​ಪಿಗೆ ಸೇರ್ಪಡೆಯಾದ ಕಾರಣ ಈ ಹುದ್ದೆಗೆ ಯಾರನ್ನು ಸಹ ನೇಮಕ ಮಾಡಿರಲಿಲ್ಲ.

Ramesh Babu appointed JDS National Secretary General, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ

By

Published : Aug 3, 2019, 11:34 AM IST

ಬೆಂಗಳೂರು:ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ನೇಮಕ

ಈ ಹಿಂದೆ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಡ್ಯಾನಿಶ್ ಅಲಿ ಇದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಅವರು ಬಿಎಸ್​ಪಿಗೆ ಸೇರ್ಪಡೆಯಾದ ಕಾರಣ ಈ ಹುದ್ದೆಗೆ ಯಾರನ್ನು ಸಹ ನೇಮಕ ಮಾಡಿರಲಿಲ್ಲ.

ಇದೀಗ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪಕ್ಷ ಸಂಘಟನೆಗೆ ಒತ್ತು ನೀಡಿದ್ದು, ಖಾಲಿ ಇರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಜೊತೆಗೆ ರಾಷ್ಟ್ರೀಯ ವಕ್ತಾರರನ್ನಾಗಿ ರಮೇಶ್ ಬಾಬು ಅವರನ್ನು ನೇಮಕ ಮಾಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details