ಬೆಂಗಳೂರು : ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಜೆಡಿಎಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರ ರಮೇಶ್ ಬಾಬು,ಹಲವಾರು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡಿಕೊಂಡು ಬಂದಿರುವ ಚಿದಂಬರಂ ಅವರು ರಾತ್ರೋ ರಾತ್ರಿ ಪಲಾಯನ ಮಾಡುವ ಅವಕಾಶ ಇರಲಿಲ್ಲ. ಅವರೇ ಪಕ್ಷದ ಸುದ್ದಿಗೋಷ್ಠಿಯಲ್ಲಿ ಈ ರಾಷ್ಟ್ರದಲ್ಲಿ ಸ್ವಾತಂತ್ರ್ಯದ ಮೌಲ್ಯಗಳು ಉಳಿಯಬೇಕೆಂದು ಹೇಳಿದ ಕೆಲವೇ ನಿಮಿಷಗಳಲ್ಲಿ ನಾಟಕೀಯವಾಗಿ ಅವರ ಬಂಧನ ಮಾಡಲಾಗಿದೆ ಎಂದರು.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಬಂಧನಕ್ಕೆ ರಮೇಶ್ ಬಾಬು ಖಂಡನೆ - chidambaram
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಬಂಧನ ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಪರಾಕಾಷ್ಠೆ ಎಂದು ಜೆಡಿಎಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಮೇಶ್ ಬಾಬು
ಪಿ. ಚಿದಂಬರಂ ಬಂಧನ ಮಾಡುವ ಮೂಲಕ ಸಿಬಿಐ ಕೇಂದ್ರ ಸರ್ಕಾರದ ಸೂಚನೆಗಳನ್ನು ಪಾಲಿಸಿದೆ.ಬಿಜೆಪಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಚಿಕೆಗೇಡಿನ ರಾಜಕಾರಣ ಮಾಡುತ್ತಿದ್ದು, ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ತಳ್ಳುವ ಮೂಲಕ ಖಾಯಂ ಆಗಿ ಅಧಿಕಾರದಲ್ಲಿ ಉಳಿಯುವ ಕನಸು ಕಾಣುತ್ತಿದೆ ಎಂದು ಟೀಕಿಸಿದ್ದಾರೆ.
ಇಂತಹ ಬಂಧನಗಳ ಮೂಲಕ ಪ್ರತಿಪಕ್ಷಗಳ ಹಣಿಯುವ ಬಿಜೆಪಿ ಪ್ರಯತ್ನಕ್ಕೆ ಪ್ರಜಾಪ್ರಭುತ್ವದ ಮೌಲ್ಯಗಳೇ ಸಂದರ್ಭಕ್ಕೆ ಅನುಗುಣವಾಗಿ ಉತ್ತರ ನೀಡಲಿದೆ. ಅರ್ಧ ರಾತ್ರಿಯ ಅಕ್ರಮ ಬಂಧನವನ್ನು ಖಂಡಿಸುವುದಾಗಿ ಹೇಳಿಕೆಯಲ್ಲಿ ರಮೇಶ್ ಬಾಬು ತಿಳಿಸಿದ್ದಾರೆ.