ಕರ್ನಾಟಕ

karnataka

ETV Bharat / state

ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ

ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ. 26ರ ಒಳಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದ್ದು, ವಿಚಾರಣೆ ಮುಂದೂಡಿದೆ.

Jarakiholi cd case
ಹೈಕೋರ್ಟ್

By

Published : Sep 5, 2022, 3:19 PM IST

ಬೆಂಗಳೂರು:ಮಾಜಿ ಸಚಿವ ರಮೇಶ್​​ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ(ಎಸ್‌ಐಟಿ)ರಚನೆ ಮತ್ತು ಬೆಂಗಳೂರಿನ ಸದಾಶಿವ ನಗರದಲ್ಲಿ ದಾಖಲಾಗಿರುವ ಬ್ಲಾಕ್ ಮೇಲ್ ಪ್ರಕರಣದ ಎಫ್ಐಆರ್ ರದ್ದು ಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸೆ.26ರ ಅಂತ್ಯದ ವೇಳೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಎಸ್‌ಐಟಿ ರಚನೆ ಮಾಡಿರುವ ಸಂಬಂಧ ಪ್ರಕರಣದ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಸುನೀತ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ, ಪ್ರಕರಣ ಕುರಿತ ಎಲ್ಲ ಆಕ್ಷೇಪಣೆಗಳು ಮತ್ತು ಘಟನೆ ಬಗೆಗಿನ ದಿನಾಂಕಗಳ ಕುರಿತು ಸಂಪೂರ್ಣ ವಿವರಣೆಯನ್ನು ಆಕ್ಷೇಪಣೆಯಲ್ಲಿ ಸಲ್ಲಿಸಬೇಕು ಎಂದು ನ್ಯಾಯಲಯ ತಿಳಿಸಿದೆ.

ವಿಚಾರಣೆ ವೇಳೆ ಹಾಜರಾಗಿದ್ದ ಸಂತ್ರಸ್ತೆ ಪರ ಸುಪ್ರೀಂಕೋರ್ಟ್ ವಕೀಲರಾದ ಇಂದಿರಾ ಜೈಸಿಂಗ್, ಕಳೆದ ವಿಚಾರಣೆ ವೇಳೆ ವರದಿಯನ್ನು ಆಂಗ್ಲ ಭಾಷೆಯಲ್ಲಿ ಒದಗಿಸಲು ನ್ಯಾಯಪೀಠ ಸೂಚನೆ ನೀಡಿತ್ತು. ಆದರೆ, ಈವರೆಗೂ ಒದಗಿಸಿಲ್ಲ. ಪ್ರಕರಣದ ಸಂಬಂಧ ಎಸ್‌ಐಟಿ ಸಲ್ಲಿಸಿರುವ ವರದಿ ಕನ್ನಡದಲ್ಲಿರುವುದರಿಂದ ಆಂಗ್ಲ ಭಾಷಾ ಅವತರಿಣಿಕೆ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿದಾರರ ಪರ ವಕೀಲರಿಗೆ ಆಂಗ್ಲ ಭಾಷೆಯ ವರದಿಯನ್ನು ಸಲ್ಲಿಸಬೇಕು ಎಂದು ಎಸ್‌ಐಟಿ ಪರ ವಕೀಲರಿಗೆ ಸೂಚನೆ ನೀಡಿತು. ಅಲ್ಲದೇ, ಪ್ರಕರಣ ಸಂಬಂಧ ಅರ್ಜಿದಾರರು ಮತ್ತು ಪ್ರತಿವಾದಿಗಳು ಸಲ್ಲಿಸುವ ಲಿಖಿತ ವಾದವನ್ನು ಆಧರಿಸಿ ಪ್ರತ್ಯೇಕ ವರದಿ ಸಲ್ಲಿಸುವಂತೆ ಪ್ರಕರಣದ ಅಮಿಕಸ್ ಕ್ಯೂರಿ(ನ್ಯಾಯಾಲಯಕ್ಕೆ ನೆರವಾಗುವವರು) ಸಂದೇಶ್ ಚೌಟ ಅವರಿಗೆ ನ್ಯಾಯಪೀಠ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ:ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

ABOUT THE AUTHOR

...view details