ತಂಡದಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್, ಅಪರಾಧ ವಿಭಾಗದ ಡಿಸಿಪಿ (ಕ್ರೈಂ- 1) ರವಿ ಕುಮಾರ್ ಇರಲಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ತಂಡ ರಚಿಸಿದ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್
15:05 March 12
ಎಸ್ಐಟಿ ತಂಡದಲ್ಲಿರುವ ಅಧಿಕಾರಿಗಳು
13:41 March 12
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದ ಅಧಿಕಾರಿಗಳ ತಂಡವನ್ನು ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಪ್ರಕಟಿಸಿದ್ದಾರೆ.
ತಂಡದಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್, ಅಪರಾಧ ವಿಭಾಗದ ಡಿಸಿಪಿ (ಕ್ರೈಂ- 1) ರವಿ ಕುಮಾರ್ ಇರಲಿದ್ದಾರೆ.
ಸಿಸಿಬಿ ಎಸಿಪಿ ಧರ್ಮೇಂದ್ರ ಪ್ರಕರಣದ ತನಿಖಾಧಿಕಾರಿಯಾಗಿದ್ದು, ಇವರ ಜೊತೆಗೆ ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು, ಕಬ್ಬನ್‌ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ಸಹ ವಿಶೇಷ ತನಿಖಾ ತಂಡದಲ್ಲಿದ್ದಾರೆ.
ರಚನೆಯಾಗಿರುವ ಎಸ್ಐಟಿ ತನಿಖೆ ಶುರುಮಾಡಿದೆ. ಈಗಾಗಲೇ ಪ್ರಾಥಮಿಕ ಮಾಹಿತಿಯನ್ನೂ ಕಲೆ ಹಾಕಿದೆ. ವಿಚಾರಣೆ ವೇಳೆ ಅಗತ್ಯಬಿದ್ದರೆ ಸಂಬಂಧಪಟ್ಟವರಿಗೆ ನೋಟಿಸ್ ನೀಡಲಿದ್ದೇವೆ. ಈ ಮೂಲಕ ಸಿಡಿ ಪ್ರಕರಣ ಸಂಬಂಧ ಆದಷ್ಟು ಬೇಗ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಅವರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.