ಕರ್ನಾಟಕ

karnataka

ETV Bharat / state

ಕಾಲಮಿತಿಯೊಳಗೆ ಎತ್ತಿನಹೊಳೆ ಯೋಜನೆ‌ ಪೂರ್ಣ.. ಸಚಿವ ರಮೇಶ್ ಜಾರಕಿಹೊಳಿ‌ ಅಭಯ - ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

5 ಸಿವಿಲ್ ಮತ್ತು 2 ಎಲೆಕ್ಟ್ರಿಕಲ್ ಪ್ಯಾಕೇಜ್ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಲಮಿತಿಯೊಳಗೆ ವಿದ್ಯುತ್ ಶಕ್ತಿ ಪೂರೈಸುವ ಕಾಮಗಾರಿ ಪೂರ್ಣಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ಹಲವಾರು ಪ್ರದೇಶಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ.

Ramesh jarkiholi conducted meeting about Ettinahole project
ಸಚಿವ ರಮೇಶ್ ಜಾರಕಿಹೊಳಿ‌

By

Published : May 11, 2020, 12:20 PM IST

ಬೆಂಗಳೂರು: ಎತ್ತಿನಹೊಳೆ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಕಲ್ಪಕ್ಕೆ ಸರ್ಕಾರ ಕಟಿಬದ್ಧವಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಕುರಿತಂತೆ ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ‌ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ್ 2021ಕ್ಕೆ ಮೊದಲ ಹಂತದ ಯೋಜನೆ ಆರಂಭವಾಗಲಿದೆ ಎಂದರು.

5 ಸಿವಿಲ್ ಮತ್ತು 2 ಎಲೆಕ್ಟ್ರಿಕಲ್ ಪ್ಯಾಕೇಜ್ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಲಮಿತಿಯೊಳಗೆ ವಿದ್ಯುತ್ ಶಕ್ತಿ ಪೂರೈಸುವ ಕಾಮಗಾರಿ ಪೂರ್ಣಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ಹಲವಾರು ಪ್ರದೇಶಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ರೈತರ ಮನವೊಲಿಸಿ ಪರಿಹಾರ ನೀಡಬೇಕು. ಯೋಜನೆಯ ಮೊದಲ ಹಂತ ಮುಂದಿನ ವರ್ಷದ ಮಾರ್ಚ್‌ನೊಳಗೆ ಮುಗಿಯಲೇಬೇಕು. ಮುಂದಿನ‌ ಮಳೆಗಾಲದಲ್ಲಿ ನೀರು ಹರಿಸುವಂತಾಗಬೇಕೆಂದು‌ ಸಚಿವರು ಸೂಚಿಸಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ರಾವ್ ಪೇಶ್ವೆ ಸೇರಿ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details