ಕರ್ನಾಟಕ

karnataka

ETV Bharat / state

ಇವತ್ತೂ ಸಿಎಂ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ.. ಶನಿವಾರ ಹಾನಗಲ್‌ನಲ್ಲಿ ಮಾಜಿ ಸಚಿವರಿಂದ ಮತ ಬೇಟೆ.. - ಹಾನಗಲ್ ಕ್ಷೇತ್ರದಲ್ಲಿ ಶನಿವಾರದಿಂದ ಜಾರಕಿಹೊಳಿ ಚುನಾವಣಾ ಪ್ರಚಾರ

ಶನಿವಾರ ಹಾನಗಲ್ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿರುವೆ ಎಂದರು. ಬೇರೆ ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು..

ramesh jarkiholi meets cm basavaraja bommai
ಸಿಎಂ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

By

Published : Oct 20, 2021, 7:07 PM IST

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿರುವ ರಮೇಶ್ ಜಾರಕಿಹೊಳಿ ಇಂದೂ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಿಎಂ ನಿವಾಸದಲ್ಲಿ ಇಂದು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಮೇಶ್ ಜಾರಕಿಹೊಳಿ, ಹಾನಗಲ್ ಕ್ಷೇತ್ರದ ಉಪಚುನಾವಣೆ ಸಂಬಂಧ ಸಿಎಂ ಜೊತೆ ಚರ್ಚೆ ಮಾಡಿದ್ದೆ.

ಶನಿವಾರ ಹಾನಗಲ್ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿರುವೆ ಎಂದರು. ಬೇರೆ ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಉಪ ಚುನಾವಣೆ ಪ್ರಚಾರದ ಅಖಾಡಕ್ಕೆ ಇಳಿಯಲಿರುವ ಜಾರಕಿಹೊಳಿ, ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಶನಿವಾರ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ:ರಮೇಶ್ ಜಾರಕಿಹೊಳಿ‌ಗೆ ಉನ್ನತ ಸ್ಥಾನ ನೀಡಬೇಕು: ಶಾಸಕ ಮಹೇಶ್ ಕುಮಟಳ್ಳಿ ಆಗ್ರಹ

ABOUT THE AUTHOR

...view details