ಬೆಂಗಳೂರು:ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿ ಮಾಡುವ ಮೂಲಕ ಬಿಜೆಪಿ ಸರ್ಕಾರ ಬಡ ರೈತರು, ಹಳ್ಳಿಗಾಡು ಜನರ ಆರ್ಥಿಕತೆಯನ್ನೇ ಬುಡಮೇಲು ಮಾಡಲು ಮುಂದಾಗಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗದ್ಗದಿತರಾದ ಘಟನೆ ನಡೆಯಿತು.
ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧದ ನಡುವೆ ಗೋಹತ್ಯೆ ನಿಷೇಧ ವಿಧೇಯಕ ತಂದಿದ್ದಾರೆ. ಹೀಗೆ ಮಾಡುತ್ತಾ ಹೋದರೆ ನಾಳೆಯಿಂದ ಕೆಎಂಎಫ್ ಬೇಡ, ಮಿಲ್ಕ್ ಫೆಡರೇಷನ್ ಬೇಡ, ಏನೂ ಬೇಡ ಎನ್ನುತ್ತಾರೆ ಎಂದು ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.