ಬೆಂಗಳೂರು:ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹುಟ್ಟುಹಬ್ಬ: ಶುಭ ಕೋರಿದ ಸುಧಾಕರ್,ರಾಮುಲು - ಡಾ.ಜಿ ಪರಮೇಶ್ವರ್ ಹುಟ್ಟುಹಬ್ಬ ಶುಭ ಕೋರಿದ ಸುಧಾಕರ್,ರಾಮುಲು
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟುಹಬ್ಬದ ಅಂಗವಾಗಿ ಸಚಿವ ಡಾ.ಸುಧಾಕರ್ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಟ್ವಿಟರ್ ಮೂಲಕ ಶುಭ ಹಾರೈಸಿದ್ದಾರೆ.
ಡಾ.ಜಿ ಪರಮೇಶ್ವರ್
ಹಿರಿಯ ನಾಯಕರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘಕಾಲ ನಾಡಿನ ಜನತೆಯ ಸೇವೆ ಮಾಡುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿಗಳೂ ಹಾಗೂ ಆತ್ಮೀಯರೂ ಆದ ಡಾ.ಜಿ ಪರಮೇಶ್ವರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ದೀರ್ಘ ಆಯುರಾರೋಗ್ಯವನ್ನು ಕರುಣಿಸಲೆಂದು ಕೇಳಿಕೊಳ್ಳುತ್ತೇನೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.