ಕರ್ನಾಟಕ

karnataka

ETV Bharat / state

ಸಚಿವ ಶ್ರೀರಾಮುಲು ಪುತ್ರಿಯ ವಿವಾಹ ಸಮಾರಂಭ: ನವ ಜೋಡಿಗೆ ಶುಭ ಕೋರಿದ ಡಿಕೆಶಿ

ಇಂದು ನಗರದ ಖಾಸಗಿ ಹೋಟೆಲ್​ನಲ್ಲಿ ಜರುಗಿದ ಸಚಿವ ಶ್ರೀರಾಮುಲು ಪುತ್ರಿ ರಕ್ಷಿತಾ ಅವರ ಮದುವೆ ನಿಶ್ಚಿತಾರ್ಥ ಸಮಾರಂಭಕ್ಕೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಗಮಿಸಿ ನವಜೋಡಿಗೆ ಶುಭ ಕೋರಿದ್ರು.

ಜೋಡಿಗೆ ಶುಭ ಕೋರಿದ ಡಿಕೆಶಿ
DK Shivakumar wishes new couple

By

Published : Dec 18, 2019, 5:00 PM IST

ಬೆಂಗಳೂರು:ಸಚಿವ ಶ್ರೀರಾಮುಲು ಪುತ್ರಿ ರಕ್ಷಿತಾ ಮದುವೆ ನಿಶ್ಚಿತಾರ್ಥ ಸಮಾರಂಭ ಇಂದು ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪಾಲ್ಗೊಂಡು ನವ ದಂಪತಿಗೆ ಶುಭ ಕೋರಿದರು.

ಶ್ರೀರಾಮುಲು ಪುತ್ರಿಯ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ

ನಗರದ ತಾಜ್ ವೆಸ್ಟೆಂಡ್​ ಹೋಟೆಲ್​ನಲ್ಲಿಆರೋಗ್ಯ ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಮದುವೆ ನಿಶ್ಚಿತಾರ್ಥವು ಹೈದರಾಬಾದ್​ ಮೂಲದ ಉದ್ಯಮಿ ಲಲಿತ್​ ಜೊತೆ ನಿಶ್ಚಿತಾರ್ಥ ಸಮಾರಂಭವು ಅದ್ಧೂರಿಯಾಗಿ ಜರುಗಿದ್ದು, ಈ ಕಾರ್ಯಕ್ರಮಕ್ಕೆ ಸಂಬಂಧಿಕರು, ರಾಜಕಾರಣಿಗಳು, ಗಣ್ಯವ್ಯಕ್ತಿಗಳು ಆಗಮಿಸಿದ್ದರು. ಹಾಗೆಯೇ ಡಿ.ಕೆ. ಶಿವಕುಮಾರ್ ಕೂಡ ಆಗಮಿಸಿ ರಕ್ಷಿತಾ ಹಾಗೂ ಲಲಿತ್​ ಅವರಿಗೆ ಶುಭಕೋರಿದರು.

ಡಿಕೆಶಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಚಿವ ಸೋಮಣ್ಣ ಕೂಡ ಆಗಮಿಸಿದ್ದು, ಇಬ್ಬರೂ ನಾಯಕರು ಮುಖಾಮುಖಿಯಾಗಿ ಕೆಲಕಾಲ ಉಭಯ ಕುಶಲೋಪರಿ ನಡೆಸಿದರು. ವೇದಿಕೆಯೇರಿದ ಡಿ ಕೆ ಶಿವಕುಮಾರ್ ಅವರನ್ನು ಶ್ರೀರಾಮುಲು ಹಾಗೂ ಜನಾರ್ದನ್ ರೆಡ್ಡಿ ಬರಮಾಡಿಕೊಂಡು ರಕ್ಷಿತಾ ಹಾಗೂ ಲಲಿತ್​ಗೆ ಪರಿಚಯಿಸಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಉಪಸ್ಥಿತರಿದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗುವಂತೆ ನೋಡಿಕೊಂಡರು. ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಹಿರಿಯ ರಾಜಕಾರಣಿಗಳು, ಚಿತ್ರರಂಗದ ಪ್ರಮುಖರು ಹಾಗೂ ರಾಜಕೀಯ ನಾಯಕರು ಸಮಾರಂಭದಲ್ಲಿ ಭಾಗವಹಿದ್ದರು.

For All Latest Updates

TAGGED:

ABOUT THE AUTHOR

...view details