ಬೆಂಗಳೂರು: ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಖಂಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆ ತೀವ್ರ ವಿವಾದ ಸೃಷ್ಟಿಸುವ ಸನ್ನಿವೇಶ ಗೋಚರಿಸುತ್ತಿರುವ ಬೆನ್ನಲ್ಲೇ ಸುರ್ಜೇವಾಲಾ ಈ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದೂ ಧರ್ಮ ಒಂದು ಜೀವನ ಪದ್ಧತಿ ಮತ್ತು ನಾಗರೀಕತೆಯ ವಾಸ್ತವ. ಪ್ರತಿಯೊಂದು ಧರ್ಮ, ನಂಬಿಕೆಯನ್ನು ಗೌರವಿಸಲು ಕಾಂಗ್ರೆಸ್ ನಮ್ಮ ರಾಷ್ಟ್ರವನ್ನು ನಿರ್ಮಿಸಿದೆ. ಇದು ಭಾರತದ ಸತ್ವ. ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕರಿಸಲು ಅರ್ಹವಾಗಿದೆ. ನಾವು ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.