ಬೆಂಗಳೂರು :ಬಿಜೆಪಿ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ಮತನಾಡುತ್ತಾ ಬಂದಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಕಿಡಿಕಾರುತ್ತಿದೆ. ಇದೀಗ ರೆಬಲ್ ಶಾಸಕ ಯತ್ನಾಳ್ ಅವರ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡು ರಾಜ್ಯ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ, ಮಾನ್ಯ ಯಡಿಯೂರಪ್ಪನವರೇ, ನಿಮ್ಮದೇ ಪಕ್ಷದ ಶಾಸಕ, 42 IAS ಅಧಿಕಾರಗಳ ವರ್ಗಾವಣೆಯಲ್ಲಿ ಕೋಟ್ಯಂತರ ರೂ. ಹೋಲ್‌ಸೇಲ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.