ಕರ್ನಾಟಕ

karnataka

ETV Bharat / state

ಸೋನಿಯಾ ಗಾಂಧಿಗೆ ಕೋವಿಡ್ , ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ: ಸುರ್ಜೇವಾಲಾ - ಸೋನಿಯಾ ಗಾಂಧಿ ಕುರಿತು ಸುರ್ಜೇವಾಲಾ ಹೇಳಿಕೆ

ಸೋನಿಯಾ ಗಾಂಧಿಗೆ ಕೋವಿಡ್ ತಗುಲಿದ್ದು, ಅವರು ವೈದ್ಯರ ನಿಗಾದಲ್ಲಿದ್ದಾರೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

randeep singh surjewala
ರಣದೀಪ್ ಸಿಂಗ್ ಸುರ್ಜೇವಾಲಾ

By

Published : Jun 2, 2022, 3:49 PM IST

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಅವರು ವೈದ್ಯರ ನಿಗಾದಲ್ಲಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ರಾತ್ರಿ ಸೋನಿಯಾ ಗಾಂಧಿ ಅವರಿಗೆ ಜ್ವರ ಬಂದಿತ್ತು. ಕೋವಿಡ್ ತಪಾಸಣೆ ಮಾಡಿಸಿದಾಗ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಪಡೆದು ಐಸೋಲೆಟೆಡ್ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ನಾಲ್ಕೈದು ದಿನಗಳಲ್ಲಿ ಸರಿ ಹೋಗಬಹುದು. ಇದೇ 8ರಂದು ಇಡಿ ಮುಂದೆ ಹಾಜರಾಗುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಅನ್ನೋದು ನಮ್ಮ ಅನಿಸಿಕೆ ಎಂದು ತಿಳಿಸಿದರು. ರಾಜಸ್ಥಾನ ರಾಜ್ಯ ಸಭೆ ಚುನಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಸಮರ್ಪಕವಾಗಿ ಉತ್ತರ ನೀಡದ ಸುರ್ಜೇವಾಲಾ, ಈಗಾಗಲೇ 2 ದಿನಗಳ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಕೇಸ್​ ಸಮನ್ಸ್​.. ಸೋನಿಯಾ ಗಾಂಧಿಗೆ ಕೋವಿಡ್​, ಸೆಲ್ಫ್​ ಕ್ವಾರಂಟೈನ್

ಜೆಡಿಎಸ್​ಗೆ ರಾಜ್ಯಸಭೆಯಲ್ಲಿ ಬೆಂಬಲ ನೀಡುವ ವಿಚಾರವಾಗಿಯೂ ಯಾವುದೇ ಪ್ರತಿಕ್ರಿಯೆ ನೀಡಲು ಕೈ ನಾಯಕರು ನಿರಾಕರಿಸಿದರು. ನಾವು ಸಂಕಲ್ಪ ಶಿಬಿರದ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ಉಳಿದ ವಿಚಾರಗಳನ್ನು ನಾವು ನಾಯಕರುಗಳು ಚರ್ಚೆ ಮಾಡಿಕೊಳ್ಳುತ್ತೇವೆ ಎಂದರು. ಸುದ್ದಿಗೋಷ್ಠಿ ಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ABOUT THE AUTHOR

...view details