ಬೆಂಗಳೂರು :ರಾಜ್ಯಪಾಲ ವಜುಭಾಯಿ ವಾಲಾ ಅವರು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸಂಸ್ಥೆಯ ಅಧ್ಯಕ್ಷ ಟಿ ವಿ ಮೋಹನ್‌ದಾಸ್ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ರಾಜಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ವಜುಭಾಯಿ ವಾಲಾ ಅವರು, ಪೈ ಅವರಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ ಪೈ ಅವರ ಸೇವೆ ಅನುಕರಣೀಯವಾಗಿದೆ ಎಂದರು.
ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ್ ನಾರಾಯಣ ಅವರು ಮಾತನಾಡಿ, ಮೋಹನ್‌ದಾಸ್ ಪೈ ಅವರು ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಇವರು ಇನ್ಫೋಸಿಸ್‌ನಂತಹ ಪ್ರತಿಷ್ಠಿತ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಆ ಕಂಪನಿಗೆ ಆರ್ಥಿಕ ಸದೃಢತೆ ತಂದುಕೊಟ್ಟವರು. ಅಂತಹವರಿಗೆ ಗೌರವ ಡಾಕ್ಟರೇಟ್ ಪದವಿ ಸಲ್ಲುತ್ತಿರುವುದು ಸಂತೋಷ ಉಂಟು ಮಾಡಿದೆ ಎಂದರು.