ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ಖಂಡಿಸಿ ರಣದೀಪ್ ಸುರ್ಜೆವಾಲಾ ಟ್ವೀಟ್
ಕರ್ನಾಟಕದಲ್ಲಿ ಜನವಿರೋಧಿ ಬಿಜೆಪಿ ಸರ್ಕಾರವು ವಿದ್ಯುತ್ ದರವನ್ನು ಏಕಾಏಕಿ ಪ್ರತಿ ಯುನಿಟ್‌ಗೆ 40 ಪೈಸೆಯಷ್ಟು ಹೆಚ್ಚಿಸಿದೆ. ಕೂಡಲೇ ಸರ್ಕಾರವು ಈ ಆದೇಶವನ್ನು ಹಿಂಪಡೆಯಬೇಕೆಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.
ಲಾಕ್‌ಡೌನ್ ಹಿನ್ನೆಲೆ ರಾಜ್ಯದ ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ. ವ್ಯಾಪಾರ, ಉದ್ದಿಮೆಗಳು ನಷ್ಟ ಅನುಭವಿಸುತ್ತಿವೆ. ಈ ಸಂದರ್ಭದಲ್ಲಿ ಜನವಿರೋಧಿ ಬಿಜೆಪಿ ಸರ್ಕಾರವು ವಿದ್ಯುತ್ ದರವನ್ನು ಏಕಾಏಕಿ ಪ್ರತಿ ಯುನಿಟ್‌ಗೆ 40 ಪೈಸೆಯಷ್ಟು ಹೆಚ್ಚಿಸಿದೆ. ಕೂಡಲೇ ಸರ್ಕಾರವು ಈ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ವಿದ್ಯುತ್ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದ್ದಾರೆ. ಉಪಚುನಾವಣೆ ಮತದಾನ ಮುಕ್ತಾಯವಾಗುತ್ತಿದ್ದಂತೆ ಸರ್ಕಾರ ಜನರ ಮೇಲೆ ಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪುಷ್ಟಿ ನೀಡುವ ರೀತಿ ಇದೀಗ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಕೂಡ ಟ್ವೀಟ್ ಮೂಲಕ ತಮ್ಮ ಬೇಸರ ಹೊರಹಾಕಿದ್ದಾರೆ.