ಬೆಂಗಳೂರು:ಕೊಟ್ಟ ಕುದುರೆಯನ್ನು ಏರದವನು ವೀರನು ಅಲ್ಲ, ಧೀರನೂ ಅಲ್ಲ ಎನ್ನುವ ಪರಿಸ್ಥಿತಿ ಕಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರದ್ದಾಗಿದೆ ಎಂದು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ತಮ್ಮ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ. ಆದರೆ, ಮುಂದೆ ತಮ್ಮ ಸರ್ಕಾರ ಬರುತ್ತದೆ ಎನ್ನುವ ಭ್ರಮೆ ಕಾಂಗ್ರೆಸ್ ನಾಯಕರದ್ದಾಗಿದೆ. ಕೊರೊನಾ ಸಂದರ್ಭದಲ್ಲಿ ಅದ್ದೂರಿಯಾಗಿ ಸಮಾರಂಭ ಮಾಡುವುದು ಸರಿನಾ ಎಂದು ಪ್ರಶ್ನಿಸಿದ್ದಾರೆ.
ಡಿ ಕೆ ಶಿವಕುಮಾರ್ ಕುರಿತು ರೇಣುಕಾಚಾರ್ಯ ಲೇವಡಿ ಕಾಂಗ್ರೆಸ್ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವುದು ಬೇಡ, ಸಿಎಂ ಬಿ. ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುತ್ತಿದ್ದಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಪರಿಸ್ಥಿತಿ ಉತ್ತಮವಾಗಿದೆ. ಹೀಗಾಗಿ ರಾಜಕೀಯ ಸಮಾರಂಭ ಬೇಡ ಎನ್ನುವುದು ಕೇಂದ್ರದ ನಿರ್ಧಾರವಾಗಿದೆ ಎಂದು ಸರ್ಕಾರದ ಕ್ರಮವನ್ನು ರೇಣುಕಾಚಾರ್ಯ ಸಮರ್ಥಿಸಿಕೊಂಡರು.
ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿರುವುದು ಸಿದ್ದರಾಮಯ್ಯ ಅವರಿಗೂ ಸಹಿಸಲಾಗುತ್ತಿಲ್ಲ. ಹೀಗಾಗಿ ಸುಮ್ಮನೆ ಏನೋ ಒಂದು ಹೇಳಬೇಕು ಎಂದು ಅವರು ಹೇಳುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿಕೆಗೂ ಟಾಂಗ್ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ವೋಟ್ ಬ್ಯಾಂಕ್ ರಾಜಕಾರಣ ಮಾಡುವವರು, ಅವರಿಗೆ ಬೆದರಿಕೆ ಕರೆ ಬಂದಿದೆ ಎನ್ನುವ ವಿಚಾರವೇ ಹಾಸ್ಯಾಸ್ಪದ. ಇದೆಲ್ಲ ಸುಳ್ಳು, ಖರ್ಗೆ ಪುತ್ರ ದೂರು ನೀಡಿರುವುದು ಹಾಗೂ ಖರ್ಗೆ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ನಲ್ಲಿ ಸೋತವರಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ನೀಡಬಾರದಿತ್ತು ಎಂದು ಹೇಳುತ್ತಿದ್ದಾರೆ. ಇದನ್ನು ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಖರ್ಗೆ ದುರಂತನಾಯಕ ಆಗಬಾರದಿತ್ತು ಎಂದು ರೇಣುಕಾಚಾರ್ಯ.