ಬೆಂಗಳೂರು:ಮನುಷ್ಯ ಪಶುಗಳಿಗಿಂತ ಕಡೆಯಾಗಿರುವ ಸಾಕಷ್ಟು ನಿದರ್ಶನಗಳು ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿವೆ. ಸಣ್ಣ ಮಗುವಿನಿಂದ ಹಿಡಿದು ವೃದ್ಧೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಮೃಗೀಯ ವರ್ತನೆಗೆ ಸಾಕ್ಷಿಯಾಗಿವೆ.
ಅತ್ಯಾಚಾರವೆಂಬುದು ಸಮಾಜಕ್ಕೆ ಎದುರಾಗಿರುವ ಪಿಡುಗಾಗಿದೆ. ಅಂತಹದೇ ಒಂದು ಬೆಚ್ಚಿ ಬೀಳಿಸುವ ಪ್ರಕರಣ ಬೆಂಗಳೂರಿನ ವೈಟ್ ಫೀಲ್ಡ್ ವಿಭಾಗದ ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಮೇಲೆ ಬಾಲಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೂರು ದಿನಗಳ ಹಿಂದೆ ಈ ಹೇಯಕೃತ್ಯ ನಡೆದಿದ್ದು, ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.