ದೊಡ್ಡಬಳ್ಳಾಪುರ : ಆಟವಾಡುತ್ತಿದ್ದ ಬಾಲಕಿಯನ್ನು ಪಾಳು ಬಿದ್ದ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಘಟನೆ ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ! - ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ,
ದೊಡ್ಡಬಳ್ಳಾಪುರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಆರೋಪಿ ಗಿರಿಯಪ್ಪ(30) ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನ ಬಲವಂತವಾಗಿ ಪಾಳುಬಿದ್ದ ಮನೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ, ಬಾಲಕಿ ಕಿರುಚಿಕೊಂಡಿದ್ದು, ಆಕೆಯ ಕುಟುಂಬದವರು ಸ್ಥಳಕ್ಕೆ ದೌಡಾಯಿಸಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರ ಮಹಿಳಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.
Last Updated : Mar 18, 2021, 9:47 AM IST