ಕರ್ನಾಟಕ

karnataka

ETV Bharat / state

ಬೆಂಗಳೂರಿನ ರ‍್ಯಾಪಿಡ್ ರಸ್ತೆ ಬಳಕೆಗೆ ಮುಕ್ತ: ವಾಹನ ಸವಾರರಿಂದ ಉತ್ತಮ ಪ್ರಕ್ರಿಯೆ

ರಾಜ್ಯ ರಾಜಧಾನಿಯಲ್ಲಿ ಪ್ರಪ್ರಥಮ ಬಾರಿಗೆ ನಿರ್ಮಾಣ ಮಾಡಿರುವ ಬಿಬಿಎಂಪಿಯ ಮಹತ್ವಾಕಾಂಕ್ಷೆಯ ರ‍್ಯಾಪಿಡ್ ರಸ್ತೆಯು ವಾಹನ ಸವಾರರ ಬಳಕೆಗೆ ಮುಕ್ತವಾಗಿದ್ದು, ಹೊಸ ಅನುಭವ ನೀಡುತ್ತಿದೆ.

rapid road good response from the vehicle riders
vರ‍್ಯಾಪಿಡ್ ರಸ್ತೆ ಬಳಕೆಗೆ ಮುಕ್ತ: ವಾಹನ ಸವಾರರಿಂದ ಉತ್ತಮ ಪ್ರಕ್ರಿಯೆ

By

Published : Dec 8, 2022, 9:46 PM IST

ಬೆಂಗಳೂರು:ನಗರದ ಹಳೆ ಮದ್ರಾಸ್ ರಸ್ತೆಯ ಹೊಸ ಬಿನ್ನಮಂಗಲ ವೃತ್ತದಲ್ಲಿ 500 ಮೀಟರ್ ರಸ್ತೆಯನ್ನು ‘ಪ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಕಾಂಕ್ರೀಟ್ ಪೇವ್‌ಮೆಂಟ್’ ತಂತ್ರಜ್ಞಾನದಿಂದ ರ‍್ಯಾಪಿಡ್ ರಸ್ತೆಯಾಗಿ ಪ್ರಾಯೋಗಿಕವಾಗಿ ನಿರ್ಮಿಸಲಾಗಿದೆ. ಇಂದಿನಿಂದ ವಾಹನ ಸಂಚಾರ ಶುರುವಾಗಿದ್ದು, ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಈಗಾಗಲೇ ನಗರದಲ್ಲಿ ವೈಟ್ ಟಾಪಿಂಗ್ ಅಥವಾ ಟೆಂಡರ್ ಶ್ಯೂರ್ ಕಾಮಗಾರಿ ನಡೆಸುವ ಸಮಯದಲ್ಲಿ ವಾಹನಗಳ ಸಂಚಾರ ನಿಷೇಧಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತದೆ. ಇದನ್ನು ತಪ್ಪಿಸುವ ಸಲುವಾಗಿ ಪಾಲಿಕೆಯು ಪ್ರಾಯೋಗಿಕವಾಗಿ ರ‍್ಯಾಪಿಡ್ ರಸ್ತೆ ಎಂಬ ವಿನೂತನ ತಂತ್ರಾಜ್ಞಾನವನ್ನು ಅನುಷ್ಠಾನಗೊಳಿಸಿದೆ.

ರ‍್ಯಾಪಿಡ್ ರಸ್ತೆ

ರಸ್ತೆ ಕ್ಯೂರಿಂಗ್ ಮಾಡುವ ಅವಶ್ಯಕತೆಯಿಲ್ಲ: ಇದರಿಂದ ರಸ್ತೆ ಕ್ಯೂರಿಂಗ್ ಮಾಡುವ ಅವಶ್ಯಕತೆಯಿರುವುದಿಲ್ಲ. ಪ್ರೀಕಾಸ್ಟ್ ಪ್ಯಾನಲ್ ಅಳವಡಿಸಿದ ಕೂಡಲೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬಹುದಾಗಿದೆ. ಈಗ ಬಿಬಿಎಂಪಿ, ಆದಿತ್ಯ ಬಿರ್ಲಾ ಅಲ್ಟ್ರಾ ಟೆಕ್ ಸಂಸ್ಥೆಯ ಸಹಯೋಗದೊಂದಿಗೆ ರ‍್ಯಾಪಿಡ್ ರಸ್ತೆಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ರಸ್ತೆಯು ದೀರ್ಘಕಾಲ ಬಾಳಿಕೆ ಬರಲಿದ್ದು, ದೇಶದಲ್ಲಿ ಇದೇ ಮೊದಲ ಬಾರಿಗೆ ರ‍್ಯಾಪಿಡ್ ರಸ್ತೆಯೆಂಬ ವಿನೂತನ ತಂತ್ರಜ್ಞಾನವನ್ನು ಬಳಸಲಾಗಿದೆ.

ಕ್ಷಿಪ್ರ ಗಟ್ಟಿಯಾಗಿಸುವ ಕಾಂಕ್ರೀಟ್: ಒಂದು ಫ್ರೀಕಾಸ್ಟ್ ಪ್ಯಾನಲ್ 5 ಅಡಿ ಅಗಲ, 20 ಅಡಿ ಉದ್ದ ಹಾಗೂ 7 ಇಂಚು ದಪ್ಪವಿದೆ. ಪ್ರತಿ 45 ಮೀಟರ್ ಗೂ ಕ್ಷಿಪ್ರ ಗಟ್ಟಿಯಾಗಿಸುವ ಕಾಂಕ್ರೀಟ್ ಹಾಕಲಾಗಿದೆ. ಫ್ರೀಕಾಸ್ಟ್ ಪ್ಯಾನಲ್‌ಗಳನ್ನು ಬೇರೆಡೆ ತಯಾರಿಸಿ ಕ್ಯೂರಿಂಗ್ ಮಾಡಿಕೊಂಡು ತರಲಾಗುತ್ತದೆ. ರಸ್ತೆಗಳ ವಿನ್ಯಾಸಕ್ಕೆ ತಕ್ಕಂತೆ ಪ್ಯಾನಲ್ ಗಳನ್ನು ಸಿದ್ದಪಡಿಸಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರಿ ವಾಹನಗಳಿಗೂ ಬಳಕೆ:ಮೊದಲಿಗೆ ರಸ್ತೆಯನ್ನು ಸಮತಟ್ಟಾಗಿ ಮಾಡಿಕೊಂಡು ಅದರ ಮೇಲೆ ಫ್ರೀಕಾಸ್ಟ್ ಪ್ಯಾನಲ್‌ಗಳನ್ನು ಅಳವಡಿಸಲಾಗಿದೆ. ಪ್ರತಿ ಫ್ರೀಕಾಸ್ಟ್ ಪ್ಯಾನಲ್​ಗಳಲ್ಲಿ 4 ರಂಧ್ರಗಳಿರಲಿದ್ದು, ವಾಹನಗಳು ಇದರ ಮೇಲೆ ಸಂಚರಿಸುವಾಗ ವಾಹನಗಳ ಭಾರದಿಂದ ಪ್ಯಾನಲ್​ಗಳು ಅಲುಗಾಡದಂತೆ ಒಂದು ಪ್ಯಾನಲ್​ನಿಂದ ಮತ್ತೊಂದು ಪ್ಯಾನಲ್‌ಗೆ ಪೋಸ್ಟ್ ಟೆನ್ಷನಿಂಗ್ ಮಾಡಲಾಗುತ್ತದೆ. ಇದರಿಂದ ಎಷ್ಟೇ ಭಾರದ ವಾಹನಗಳು ಸಂಚರಿಸಿದರು ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ರ‍್ಯಾಪಿಡ್ ರಸ್ತೆ

ದೇಶದಲ್ಲೇ ಇದೇ ಮೊದಲು:ಬಿಬಿಎಂಪಿಯು ಆದಿತ್ಯ ಬಿರ್ಲಾ ಸಂಸ್ಥೆಯ ಸಹಯೋಗದೊಂದಿಗೆ ರ‍್ಯಾಪಿಡ್ ರಸ್ತೆ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ. ಈ ರಸ್ತೆಯು ದೀರ್ಘಕಾಲ ಬಾಳಿಕೆ ಬರಲಿದ್ದು, ದೇಶದಲ್ಲಿ ಇದೇ ಮೊದಲ ಬಾರಿಗೆ ರ‍್ಯಾಪಿಡ್ ರಸ್ತೆಯೆಂಬ ವಿನೂತನ ತಂತ್ರಜ್ಞಾನವನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ವಾಹನ ಸವಾರರ ಮೇಲೆ ಹೊಸ ಅಸ್ತ್ರ: ತಂತ್ರಜ್ಞಾನ ಬಳಸಿ ಸಂಚಾರಿ ನಿಯಮ ಉಲ್ಲಂಘನೆಗೆ ಕ್ರಮ

ABOUT THE AUTHOR

...view details