ಕರ್ನಾಟಕ

karnataka

ETV Bharat / state

ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ವಿತರಣೆ ಕಾರ್ಯ ನಡೆದಿದೆ: ಸಚಿವ ಉಮೇಶ್ ಕತ್ತಿ - ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‍ ಕತ್ತಿ ವಿಧಾನಸಭೆಯಲ್ಲಿ ಮಾತು

ಅರ್ಹರು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅದನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಿದ್ದಾರೆ. ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‍ ಕತ್ತಿ
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‍ ಕತ್ತಿ

By

Published : Feb 17, 2022, 4:04 PM IST

ಬೆಂಗಳೂರು: ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಅದನ್ನು ವಿತರಿಸುವ ಕಾರ್ಯ ಮುಂದುವರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‍ ಕತ್ತಿ ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಪ್ರಶ್ನೋತ್ತರ ವೇಳೆ ಶಾಸಕ ಎಲ್. ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಲಾಕ್​ಡೌನ್ ಅವಧಿಯಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯವೂ ನಿಧಾನಗತಿಯಲ್ಲಿ ನಡೆದಿತ್ತು. ಅಲ್ಲದೆ, ಈ ಅವಧಿಯಲ್ಲಿ ಬಯೋಮೆಟ್ರಿಕ್ ಹಿಂಪಡೆದ ಕಾರಣ ಪಡಿತರ ಚೀಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಈಗ ಅರ್ಹರು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅದನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಿದ್ದಾರೆ. ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ ಎಂದರು.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‍ ಕತ್ತಿ

ಮೈಸೂರು ಜಿಲ್ಲೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಫಲಾನುಭವಿಗಳು ಆನ್​​​ಲೈನ್ ಮೂಲಕ ಅರ್ಜಿ ಸಲ್ಲಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮಾರ್ಚ್ 31ರೊಳಗೆ ಪಡಿತರ ಚೀಟಿಯನ್ನು ಇವರಿಗೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಇದನ್ನೂ ಓದಿ:ಪರಿಷತ್​ನಲ್ಲಿ ಮುಂದುವರೆದ ಕಾಂಗ್ರೆಸ್ ಧರಣಿ: ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಹೊಸ ಇಂಜಿನಿಯರಿಂಗ್ ಕಾಲೇಜ್ ಇಲ್ಲ: ಈಗಾಗಲೇ ಇರುವ ಕಾಲೇಜುಗಳಲ್ಲೇ ಪೂರ್ಣ ಪ್ರಮಾಣದ ಪ್ರವೇಶಾತಿ ಆಗದ ಕಾರಣ ರಾಜ್ಯದಲ್ಲಿ ಹೊಸದಾಗಿ ಇಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿಧಾನಸಭೆಯಲ್ಲಿ ಶಾಸಕ ಬೂಸನೂರು ರಮೇಶ್ ಪ್ರಶ್ನೆಗೆ ಉತ್ತರಿಸಿದರು.

ಈಗಾಗಲೇ ಅಸ್ಥಿತ್ವದಲ್ಲಿರುವ ಅನೇಕ ಇಂಜನಿಯರ್ ಕಾಲೇಜುಗಳಲ್ಲಿ ಶೇ.50ರಿಂದ 75ರಷ್ಟು ಸೀಟುಗಳು ಭರ್ತಿಯಾಗದೇ ಖಾಲಿ ಉಳಿದಿವೆ. ಇರುವ ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆ ಇರುವುದರಿಂದ ಹೊಸದಾಗಿ ಇಂನಿಯರಿಂಗ್ ಕಾಲೇಜು ತೆರೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಪ್ರಸ್ತಾಪಿಸಿದರು.

ಬಿಜಾಪುರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶೇ.75ರಷ್ಟು ಸೀಟುಗಳು ಖಾಲಿ ಉಳಿದಿವೆ. ಎಐಸಿಟಿಇ ನಿಯಮಗಳ ಪ್ರಕಾರ ಆಸ್ಥಿತ್ವದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ABOUT THE AUTHOR

...view details