ಬೆಂಗಳೂರು:ಕೇಂದ್ರ ಸರ್ಕಾರದ ಸೂಚನೆಯಂತೆ ಮೇ ಮತ್ತು ಜೂನ್ ತಿಂಗಳಲ್ಲಿ ರೇಷನ್ ಕಾರ್ಡ್ ಹೊಂದಿಲ್ಲದ ವಲಸೆ ಕಾರ್ಮಿಕರು ಹಾಗೂ ಇತರೆ ಬಡವರು ಸೇರಿದಂತೆ 9 ಲಕ್ಷ ಮಂದಿಗೆ ಪಡಿತರ ನೀಡಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರೇಷನ್ ಕಾರ್ಡ್ ಇಲ್ಲದ 9 ಲಕ್ಷ ಜನರಿಗೆ ಪಡಿತರ ವಿತರಣೆ: ಹೈಕೋರ್ಟ್ಗೆ ಮಾಹಿತಿ ನೀಡಿದ ಸರ್ಕಾರ - ಕೇಂದ್ರ ಸರ್ಕಾರ
ಕಳೆದ ಮೇ ಹಾಗೂ ಜೂನ್ ತಿಂಗಳಲ್ಲಿ ರೇಷನ್ ಕಾರ್ಡ್ ಹೊಂದಿಲ್ಲದ 9 ಲಕ್ಷ ಜನರಿಗೆ ತಲಾ 5 ಕೆಜಿ ಅಕ್ಕಿ ಮತ್ತು 1 ಕೆಜಿ ಬೇಳೆ ವಿತರಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರ ಆಹಾರ ಭದ್ರತೆ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಸೂಚನೆಯಂತೆ ಹಾಗೂ ಆಹಾರ ಭದ್ರತೆ ಕಾಯ್ದೆ 2013ರ ವ್ಯಾಪ್ತಿಗೆ ಒಳಪಡದ ವ್ಯಕ್ತಿಗಳಿಗೆ ಪಡಿತರ ವಿತರಿಸಬೇಕು ಎಂಬ ನಿರ್ದೇಶನದಂತೆ ರಾಜ್ಯ ಸರ್ಕಾರ ವಲಸೆ ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದೆ. ಅದರಂತೆ ಕಳೆದ ಮೇ ಹಾಗೂ ಜೂನ್ ತಿಂಗಳಲ್ಲಿ ರೇಷನ್ ಕಾರ್ಡ್ ಹೊಂದಿಲ್ಲದ 9 ಲಕ್ಷ ಜನರಿಗೆ ತಲಾ 5 ಕೆಜಿ ಅಕ್ಕಿ ಮತ್ತು 1 ಕೆಜಿ ಬೇಳೆ ವಿತರಿಸಲಾಗಿದೆ. ಮೇ ತಿಂಗಳಲ್ಲಿ 3.2 ಲಕ್ಷ ಜನರಿಗೆ ಹಾಗೂ ಜೂನ್ ತಿಂಗಳಲ್ಲಿ 6.21 ಲಕ್ಷ ಜನರಿಗೆ ಪಡಿತರ ನೀಡಲಾಗಿದೆ ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.