ಬೆಂಗಳೂರು: ಲಸಿಕೆ ವಿಚಾರವಾಗಿ ಖಾಸಗಿ ಆಸ್ಪತ್ರೆಗಳ ಜೊತೆಗೂಡಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಬಿಜೆಪಿ ಶಾಸಕ ರವಿ ಸುಬ್ರಮಣ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಇಂದು ವಿಡಿಯೋ ಹೇಳಿಕೆ ನೀಡಿರುವ ಅವರು, ಶನಿವಾರ ನಡೆದ ಎ. ವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಘಟನೆಯ ಹಿಂದೆ ಕೆಲವು ದುಷ್ಕರ್ಮಿಗಳು ಮತ್ತು ಕಾಂಗ್ರೆಸ್ ಪಕ್ಷದ ಕೆಲ ಮುಖಂಡರ ಕೈವಾಡ ಇದೆ. ಇಡೀ ದೇಶವೇ ಕೊರೊನಾ ನಿಯಂತ್ರಣಕ್ಕಾಗಿ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಇಂತಹ ಆಧಾರ ರಹಿತ ಆರೋಪ ಮಾಡುವುದರಲ್ಲೇ ಸಮಯ ವ್ಯರ್ಥ ಮಾಡುವುದು ಬೇಡ ಎಂದು ಕಿಡಿಕಾರಿದ್ದಾರೆ.
ಆರೋಪಕ್ಕೆ ಬಿಜೆಪಿ ಶಾಸಕ ರವಿ ಸುಬ್ರಮಣ್ಯ ಸ್ಪಷ್ಟನೆ ಅದರ ಬದಲು ಇನ್ನು ಮುಂದಾದರೂ ಇಂತಹ ಹೀನ ಕೆಲಸ ಮಾಡುವುದನ್ನು ಬಿಟ್ಟು ರಾಜ್ಯದ ಒಳಿತಿಗಾಗಿ ಕೆಲಸ ಮಾಡುವುದರ ಕಡೆ ಗಮನ ಹರಿಸಿ. ನಿನ್ನೆ ನಡೆದ ಈ ನಿರಾಧಾರ ಆಪಾದನೆಯನ್ನು ಖಂಡಿಸಿ ಸಾವಿರಾರು ಜನರು ಸಾಮಾಜಿಕ ಜಾಲತಾಣ ಮತ್ತು ಬಹಿರಂಗವಾಗಿ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಅವರಿಗೆಲ್ಲರಿಗೂ ಈ ಮುಖಾಂತರ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಶಾಸಕ ರವಿ ಸುಬ್ರಮಣ್ಯ ತಿಳಿಸಿದ್ದಾರೆ.
ಕೊರೊನಾದಂತಹ ಈ ಸಂದರ್ಭದಲ್ಲಿ ರಾಜಕೀಯ ಬಿಟ್ಟು ಜನರ ಸಂಕಷ್ಟ ಪರಿಹಾರಕ್ಕಾಗಿ ಎಲ್ಲರೂ ಪಕ್ಷಬೇಧ ಮರೆತು ಒಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದ್ದಾರೆ. ಕಾಂಗ್ರೆಸ್ ಕೆಲ ಮುಖಂಡರು ತಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.
ಓದಿ:ಸರ್ಕಾರದ ಲಸಿಕೆ ಮಾರಾಟಕ್ಕಾಗಿ ಕಮಿಷನ್ ಅಪವಾದ: ಆರೋಪ ತಳ್ಳಿ ಹಾಕಿದ ಶಾಸಕರಿಂದ ತಿರುಗೇಟು