ಕರ್ನಾಟಕ

karnataka

ETV Bharat / state

ಬಿಬಿಎಂಪಿ ವಾರ್ಡ್ ಪುನರ್‌ವಿಂಗಡಣೆ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ - Notice to Government by highcourt

ಬಿಬಿಎಂಪಿಯ ವಾರ್ಡ್​ ಪುನರ್​ ವಿಂಗಡಣೆಗೆ ಸಂಬಂಧಿಸಿದಂತೆ ಏಕ ಸದಸ್ಯ ಪೀಠದ ಆದೇಶದಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ಹಾಗಾಗಿ ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಹೈಕೋರ್ಟ್​ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ.

ಹೈಕೋರ್ಟ್​
ಹೈಕೋರ್ಟ್​

By

Published : Nov 23, 2022, 12:40 PM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಒಂದೇ ವಾರ್ಡ್‌ನ ಮತದಾರರನ್ನು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವ ಸಂಬಂಧ ಏಕ ಸದಸ್ಯ ಪೀಠದ ಆದೇಶದಲ್ಲಿ ಯಾವುದೇ ಪ್ರಸ್ತಾಪ ಮಾಡದ ಕ್ರಮ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಸತೀಶ್ ರೆಡ್ಡಿ ಸಲ್ಲಿಸಿದ್ದ ಅರ್ಜಿ‌ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಲೆ ಅವರಿದ್ದ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ವಿಚಾರಣೆಯ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ, ಪ್ರೊ.ರವಿವರ್ಮ ಕುಮಾರ್, ಬಿಬಿಎಂಪಿ ಕಾಯಿದೆ ಸೆಕ್ಷನ್ 7(ಬಿ) ಪ್ರಕಾರ ವಿಧಾನಸಭೆ ಸದಸ್ಯರ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯೊಳಗೆ ವಾರ್ಡ್​ಗಳನ್ನು ವಿಭಾಗಿಸಬೇಕು. ಯಾವುದೇ ವಾರ್ಡ್ ಅನ್ನು ಇತರೆ ಕ್ಷೇತ್ರಗಳಿಗೆ ವಿಸ್ತರಿಸಬಾರದು ಎಂದು ಹೇಳಲಾಗಿದೆ. ಆದರೆ, ಹುಳಿಮಾವು ವಾರ್ಡ್‌ ಪುನರ್ ವಿಂಗಡನೆ ವಿಚಾರದಲ್ಲಿ ಬೊಮ್ಮನಹಳ್ಳಿ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಲಾಗಿದೆ.

ಪುನರ್​​ ಪರಿಶೀಲನೆಗೆ ಕೋರಿ ಅರ್ಜಿ: ರಾಜ್ಯ ಸರ್ಕಾರ ವಾರ್ಡ್ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ತಾನು ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ. ಇದರಿಂದ ಮತದಾರರಿಗೆ ತೀವ್ರ ತರದ ಗೊಂದಲ ಉಂಟಾಗಲಿದೆ. ಈ ಸಂಬಂಧ ಪುನರ್ ಪರಿಶೀಲನೆ ಮಾಡುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು ಎಂದು ಅರ್ಜಿದಾರರು ಏಕ ಸದಸ್ಯ ಪೀಠದಲ್ಲಿ ಮನವಿ ಮಾಡಿದ್ದರು.

ಅಲ್ಲದೇ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹುಳಿಮಾವು ವಾರ್ಡ್​ನಲ್ಲಿ ಈ ಹಿಂದೆ ಇದ್ದ 14 ವಾರ್ಡ್​ಗಳ ಜತೆಗೆ ಹೆಚ್ಚುವರಿಯಾಗಿ 6 ವಾರ್ಡ್​ಗಳನ್ನು ಸೇರ್ಪಡೆ ಮಾಡಲಾಗಿದೆ. ಇವುಗಳಲ್ಲಿ ಒಂದಾದ ಹುಳಿಮಾವು ವಾರ್ಡ್(239) ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಿ ಎರಡೂ ವಾರ್ಡ್​ಗಳಲ್ಲಿ ಸೇರಿಹೋಗಿದೆ. ಇದು ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ ಕಾಯಿದೆ 2020 ಸೆಕ್ಷನ್ 7ಕ್ಕೆ ವಿರುದ್ಧವಾಗಿದೆ.

ಇದನ್ನೂ ಓದಿ:ಮಲ್ಲತ್ತಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಕುರಿತು ಹೈಕೋರ್ಟ್​ಗೆ​ ತಿಳಿಸಿದ ಬಿಬಿಎಂಪಿ

ಈ ಸಂಬಂಧ ಏಕ ಸದಸ್ಯ ಪೀಠದಲ್ಲಿ ಸಲ್ಲಿಕೆ ಮಾಡಿದ್ದ ಮನವಿಯನ್ನು ಪರಿಗಣಿಸಿಲ್ಲ.‌ ಆದ್ದರಿಂದ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ರದ್ದು ಮಾಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠ ಸರ್ಕಾರ, ಬಿಬಿಎಂಪಿ, ನಗರಾಭಿವೃದ್ಧಿ ಇಲಾಖೆ, ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ABOUT THE AUTHOR

...view details