ಕೆ.ಆರ್.ಪುರ:ನನ್ನ ಕ್ಷೇತ್ರದ ಜನರ ಆಶಿರ್ವಾದದಿಂದ ಎರಡನೇ ಬಾರಿಗೆ ರಾಜ್ಯದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟು ಯಾವುದೇ ಖಾತೆ ನೀಡಿದರೂ ನಿಭಾಯಿಸಲು ನಾನು ಸಿದ್ಧ ಎಂದು ಸಚಿವ ಬೈರತಿ ಬಸವರಾಜ್ ಹೇಳಿದ್ಧಾರೆ.
ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೈರತಿ ಬಸವರಾಜ ಅವರಿಗೆ ಶುಭಕೋರಲು ಅವರ ನಿವಾಸಕ್ಕೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಪಕ್ಷದ ಮುಖಂಡರು ಆಗಮಿಸಿದ್ದರು. ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಒಂದು ವರ್ಷಗಳಿಂದ ನಗರಾಭಿವೃದ್ಧಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನ್ನ ಮೇಲೆ ಕೆಲಸ ನೋಡಿ ಬೊಮ್ಮಾಯಿ ಅವರು ಯಾವುದೇ ಖಾತೆ ನೀಡಿದರೂ ನಿಭಾಯಿಸುತ್ತೇನೆ. ನಗರಾಭಿವೃದ್ಧಿ ಖಾತೆಯನ್ನೇ ನೀಡಿದರೆ ಇನ್ನಷ್ಟು ಅಭಿವೃದ್ಧಿ ಕೆಲಸಗಳ ಮತ್ತು ಅಭಿವೃದ್ಧಿಗೆ ವೇಗ ನೀಡಲಾಗುವುದು ಎಂದರು.