ಬೆಂಗಳೂರು/ಚಿಕ್ಕಬಳ್ಳಾಪುರ: ಮಾಜಿ ಸಚಿವ ಶಿವಶಂಕರ್ ರೆಡ್ಡಿ ಹೇಳಿಕೆಗೆ ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ. ಕೆ ಸುಧಾಕರ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಚೇನಹಳ್ಳಿ ಪ್ರತ್ಯೇಕ ತಾಲೂಕು ಮಾಡಲು ಮುಂದಾದವರ ಕೈ ಕತ್ತರಿಸುತ್ತೇನೆ ಎಂದು ಶಿವಶಂಕರ್ ರೆಡ್ಡಿ ಹೇಳಿಕೆ ನೀಡಿದ್ದರು. ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಸುಧಾಕರ್, ನನ್ನ ಕೈ ಅಲ್ಲ, ಎದೆ ಬಗಿದರೂ ಮಂಚೇನಹಳ್ಳಿ ತಾಲೂಕು ರಚನೆಯ ವಿಷಯದಲ್ಲಿ ನಾನು ನನ್ನ ಜನರಿಗೆ ಬದ್ದನಾಗಿದ್ದೇನೆ ಎಂದು ಹೇಳಿದ್ದಾರೆ.