ಬೆಂಗಳೂರು: ರಾಜೀನಾಮೆ ನೀಡಿರುವ ಶಾಸಕರ ವಿಚಾರ ಸ್ಪೀಕರ್ಗೆ ಬಿಟ್ಟ ವಿಷಯ. ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.
ಶಾಸಕರ ರಾಜೀನಾಮೆ ಬಗ್ಗೆ ಏನೂ ಮಾತನಾಡಲ್ಲ, ಅದು ಸ್ಪೀಕರ್ಗೆ ಬಿಟ್ಟಿದ್ದು.. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು - hd devegowda
ರಾಜೀನಾಮೆ ನೀಡಿರುವ ಶಾಸಕರ ವಿಚಾರ ಸ್ಪೀಕರ್ಗೆ ಬಿಟ್ಟ ವಿಷಯ. ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಇಂದು ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡರು, ಕಾಂಗ್ರೆಸ್ ಜತೆ ಈಗಲೂ ನಮಗೆ ಯಾವುದೇ ವ್ಯತ್ಯಾಸ ಇಲ್ಲ. ಮೈತ್ರಿ ಸರ್ಕಾರ ನಿನ್ನೆ ಅಧಿಕಾರ ಕಳೆದುಕೊಂಡಿದೆ. ಇದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಎಲ್ಲರೂ ಸದನದಲ್ಲಿ ಭಾಗಹಿಸಿ ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ ಎಂದರು.
ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡ ಮೇಲೆ ಇವತ್ತು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದೇವೆ. ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಂದಿನಿಂದ ಪಕ್ಷದ ಸಂಘಟನೆ ಸಲುವಾಗಿ ಎಲ್ಲಾ ಶಾಸಕರು, ಮಾಜಿ ಮಂತ್ರಿಗಳ ಸಭೆ ಕರೆಯಲಾಗಿತ್ತು. ಎಲ್ಲರೂ ಸೇರಿ 3 ಗಂಟೆ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳನ್ನು ರೂಪಿಸಿ ತಿಳಿಸಲಾಗುತ್ತದೆ ಎಂದು ಹೇಳಿದರು.